Thursday, December 12, 2024

ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದಕ್ಕೆ, ಲಾಠಿ ಚಾರ್ಜ್ ; ಗೃಹ ಸಚಿವ ಪರಮೇಶ್ವರ್

Most read

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಎದರು ನಡೆಯುತ್ತಿದ್ದ ಪಂಚಮಸಾಲಿ ಪ್ರತಿಭಟನೆ ವ ಸಂದರ್ಭದಲ್ಲಿ ಪ್ರತಿಭಟನಾಕಾರರು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆದ್ದರಿಂದ, ಲಾಠಿ ಚಾರ್ಜ್ ಮಾಡುವ ಅನಿವಾರ್ಯ ಪರಿಸ್ಥಿತಿ ಉಂಟಾಗಿತ್ತು ಎಂದು ಗೃಹಸಚಿವ ಜಿ. ಪರಮೇಶ್ವರ್ ಅವರು ಪೊಲೀಸರನ್ನು ಸಮರ್ಥಿಸಿಕೊಂಡಿದ್ದಾರೆ.

2ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪಂಚಮಸಾಲಿಗಳ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಗೃಹಸಚಿವರು ಪ್ರತಿಕ್ರಿಯೆ ನೀಡಿದರು.

ಪ್ರತಿಭಟನೆ ಅವರ ಹಕ್ಕು. ಆದರೆ 5 ಸಾವಿರ ಟ್ರ್ಯಾಕ್ಟರ್‌ಗಳನ್ನು ತಂದು ಮುತ್ತಿಗೆ ಹಾಕಲು ಪ್ರತಿಭಟನೆ ಮಾಡಲು ಮುಂದಾಗಿದ್ದರು, ಮೂವರು ಸಚಿವರನ್ನು ಪ್ರತಿಭಟನಾ ಸ್ಥಳಕ್ಕೆ ಕಳಿಸಲಾಗಿತ್ತು. ಮಾತುಕತೆಗೆ ಮುಖ್ಯಮಂತ್ರಿಗಳು ಆಹ್ವಾನಿಸಿದ್ದರೂ ಸ್ವಾಮೀಜಿಗಳು ಬರಲಿಲ್ಲ. ಮುಖ್ಯರಸ್ತೆಗೆ ನುಗ್ಗಿದ ಪ್ರತಿಭಟನಾಕಾರರು ಕಾನೂನು ಉಲ್ಲಂಘನೆ ಮಾಡಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೋದಾಗ ಲಘು ಲಾಠಿ ಪ್ರಹಾರ ನಡೆದಿದೆ. ಈ ಸಂದರ್ಭದಲ್ಲಿ ಲಾಠಿ ಪ್ರಹಾರ ನಡೆದಿದೆ ಎಂದು ಅವರು ತಿಳಿಸಿದರು.

ಗೋಲಿಬಾರ್ ಮಾಡುವ ಉದ್ದೇಶ ಇತ್ತು ಎಂಬ ಸ್ವಾಮೀಜಿ ಹೇಳಿಕೆ ಸುಳ್ಳು ಎಂದರಲ್ಲದೆ ಪೊಲೀಸರು ಯಾರ ಮೇಲೂ ದುರುದ್ದೇಶಪೂರಿತವಾಗಿ ಲಾಠಿ ಪ್ರಹಾರ ನಡೆಸಿಲ್ಲ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದರು. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದರು. ಈ ವೇಳೆ ತಳ್ಳಾಟ ನೂಕಾಟ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಚಪ್ಪಲಿ, ಮತ್ತು ಕಲ್ಲುಗಳು ಬಿದ್ದು ಗಾಯಗೊಂಡಿದ್ದಾರೆ ಎಂದರು.

More articles

Latest article