ಕೋಲಾರ: ನಾಗರಿಕರ ಸಮಸ್ಯೆ, ಸಲಹೆ, ದೂರು ಆಲಿಸಲು ಪೊಲೀಸ್ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವಂತಹ ವಿನೂತನ ಪರಿಕಲ್ಪನೆಯಾದ ‘ಮನೆ–ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಕೋಲಾರ ಜಿಲ್ಲೆಯಲ್ಲಿ ಎಸ್ ಪಿ ಬಿ. ನಿಖಿಲ್ ಚಾಲನೆ ನೀಡಿದರು.
ಪೊಲೀಸ್ ಇಲಾಖೆಯನ್ನು ಜನಸ್ನೇಹಿಗೊಳಿಸಲು ರಾಜ್ಯ ಸರ್ಕಾರ ಮನೆ ಮನೆ ಬಾಗಿಲಿಗೆ ಪೋಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಕೋಲಾರ ತಾಲ್ಲೂಕಿನ ಸುಗಟೂರು ಗ್ರಾಮದ ಕಾಲೋನಿಗಳಲ್ಲಿ ಮನೆ ಮನೆಗೂ ಭೇಟಿ ನೀಡುವ ಮೂಲಕ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಇಂತಹ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಗಂಭೀರ ಸಮಸ್ಯೆಗಳು ಉದ್ಭವವಾಗುವುದಕ್ಕೂ ಬಗೆಹರಿಸಲು ಸಾಧ್ಯವಾಗುತ್ತದೆ. ಸಾರ್ವಜನಿಕರೊಂದಿಗೆ ಪೋಲೀಸರ ಸಂಬಂಧ ಬೆಳೆಯುವುದರ ಜತೆಗೆ ಶಂಕಾಸ್ಪದ ವ್ಯಕ್ತಿಗಳನ್ನು ಗುರುತಿಸಲು ಸಹಕಾರವಾಗುತ್ತದೆ. ಶಾಂತಿ ಮತ್ತು ಭದ್ರತೆಗೂ ನೆರವಾಗಲಿದೆ. ಸಮಾಜದಲ್ಲಿ ಯುವ ಜನತೆಯನ್ನು ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಲು ನೆರವಿಗೆ ಬರಲಿದೆ ಎಂದರು.

                                    