ಕಲಬುರಗಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅತ್ಯಾಚಾರ ಆರೋಪಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ( ವಿಶೇಷ ಪೋಕ್ಸೊ) ನ್ಯಾಯಾಲಯವು 30 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ನಿವಾಸಿ ಸೋಹಲ್ ಮಹಿಬೂಬ್ ಶಿಕ್ಷೆಗೊಳಗಾದ ಅಪರಾಧಿ. ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಪ್ರೀತಿಸುವದಾಗಿ ನಂಬಿಸಿದ್ದ. ನಂತರ ಬಾಲಕಿಯನ್ನು ಬಲವಂತವಾಗಿ ಬೆಂಗಳೂರಿಗೆ ಕರೆತಂದಿದ್ದ. ಬೆಂಗಳೂರಿನಲ್ಲಿ ಅಕ್ರಮ ಬಂಧನದಲ್ಲಿಟ್ಟು ಬಾಲಕಿ ಮೆಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಾದ ಪ್ರತಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ( ವಿಶೇಷ ಪೋಕ್ಸೊ) ನ್ಯಾಯಾಲಯ ಎಫ್‍ಟಿಎಸ್‍ಸಿ-1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಆರೋಪಿಗೆ 30 ವರ್ಷ ಜೈಲು ಶಿಕ್ಷೆ ಮತ್ತು 28 ಸಾವಿರ ರೂ ದಂಡ ವಿಧಿಸಿ ಆದೇಶಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ಬಿ ತುಪ್ಪದ ಅವರು ವಾದ ಮಂಡಿಸಿದ್ದರು.