ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ವಿಚಾರಣೆ ಜನವರಿ 7ಕ್ಕೆ ಮುಂದೂಡಿಕೆ

Most read


 ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ತಮ್ಮ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ 2025ರ ಜನವರಿ 7ಕ್ಕೆ ಮುಂದೂಡಿದೆ. ಗುರುವಾರ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ನ್ಯಾಯಾಲಯಕ್ಕೆ  ಖುದ್ದು ವಿಚಾರಣೆಗೆ ಹಾಜರಾಗುವುದರಿಂದ ನೀಡಿದ್ದ ವಿನಾಯಿತಿ ಆದೇಶವನ್ನು ಮುಂದಿನ ವಿಚಾರಣೆಯವರೆಗೂ ವಿಸ್ತರಿಸಿ ನ್ಯಾಯಮೂರ್ತಿಗಳು ಆದೇಶ ಹೊರಡಿಸಿದ್ದಾರೆ.

ಯಡಿಯೂರಪ್ಪ ಪರ ವಕೀಲರು ವಾದ ಮಂಡಿಸಿ, ಪೋಕ್ಸೋ ಪ್ರಕರಣ ಸಂಬಂಧ ದೂರು ನೀಡಿರುವ ಸಂತ್ರಸ್ತ ಬಾಲಕಿಯ ತಾಯಿಗೆ ಪದೇ ಪದೇ ದೂರು ದಾಖಲಿಸುವುದು ಅಭ್ಯಾಸವಾಗಿದೆ. ಈ ಹಿಂದೆಯೂ ಅನೇಕ ರಾಜಕಾರಣಿಗಳ ವಿರುದ್ಧ ಇವರು ದೂರು ದಾಖಲಿಸಿದ್ದಾರೆ. ಯಡಿಯೂರಪ್ಪ ವಿರುದ್ಧದ ಪೊಲೀಸ್ ವರದಿಯನ್ನು ಆಧರಿಸಿ ಸಿಆರ್‌ಪಿಸಿ ಸೆಕ್ಷನ್ 191 (ಬಿ) ಅಡಿಯಲ್ಲಿ ವಿಚಾರಣೆಗೆ ಪರಿಗಣಿಸಲಾಗಿದೆ. ಅಲ್ಲದೆ, ಯಡಿಯೂರಪ್ಪ ವಿರುದ್ಧ ಸಂತ್ರಸ್ತೆ ಸಿಆರ್‌ ಪಿಸಿ 161 (ಪೊಲೀಸರ ಮುಂದೆ ಹೇಳಿಕೆ) ಮತ್ತು 164 (ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ) ದಾಖಲಿಸಿರುವುದು ತನಿಖಾಧಿಕಾರಿಯ ಅಭಿಪ್ರಾಯವಾಗಿರಲಿದೆ. ಸಾಕ್ಷ್ಯಾಧಾರಗಳು ಸರಿ ಇವೆಯೇ
ಎಂಬುದನ್ನು ನ್ಯಾಯಪೀಠ ಇನ್ನಷ್ಟೇ ಪರಿಶೀಲಿಸಬೇಕಾಗಿದೆ. ಸಾಕ್ಷ್ಯಗಳ ಆಧಾರದಲ್ಲಿ ತನಿಖಾಧಿಕಾರಿ ತಪ್ಪು ನಿರ್ಧಾರಕ್ಕೆ ಬಂದಿದ್ದಾರೆ. ತನಿಖಾಧಿಕಾರಿಗಳ ಅಭಿಪ್ರಾಯದಂತೆ ನಿರ್ಧಾರ ತೆಗೆದುಕೊಳ್ಳುವುದು ನ್ಯಾಯಾಲಯದ ಕರ್ತವ್ಯವಲ್ಲ ಎಂದು ಪೀಠಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದರು. ಸಮಯ ಮುಗಿದಿದ್ದರಿಂದ ವಿಚಾರಣೆಯನ್ನು ಮುಂದೂಡಲಾಯಿತು

More articles

Latest article