ಬೆಂಗಳೂರು: ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೋಕ್ಸೋ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಗೌತಮ್ ಮೃತ ಆರೋಪಿ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆ ತರಲಾಯಿತಾದರೂ ಆ ವೇಳೆಗೆ ಆತ ಅಸು ನೀಗಿದ್ದ ಎಂದು ವೈದ್ಯರು ತಿಳಿಸಿದ್ದಾರೆ.
ನ್ಯಾಯಾಲಯದ 5ನೇ ಮಹಡಿಯಿಂದ ಕೆಳಗೆ ಹಾರಿ ಆರೋಪಿ ಗೌತಮ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನನ್ನು ವಿಚಾರಣೆಗಾಗಿ ಪರಪ್ಪನ ಅಗ್ರಹಾರ ಜೈಲಿನಿಂದ ಕರೆತರಲಾಗಿತ್ತು.
ಈತನ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಅತನ ಕುಟುಂಬದವರು ಉಪಸ್ಥಿತರಿದ್ದರು. ಅವಮಾನ ತಾಳಲಾರದೆ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.