ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕುರಿತು ತಮ್ಮ ವಿರುದಧ ದಾಖಲಾಗಿರುವ ಪೋಕ್ಸೋ ಪ್ರಕಣವನ್ನು ರದ್ದುಗೊಳಿಸುವಂತೆ ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 2 ಸೋಮವಾರಕ್ಕೆ ಮುಂದೂಡಲಾಗಿದೆ.
ಗುರುವಾರ ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆಯನ್ನು ಮುಂದೂಡಿತು. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ರದ್ದುಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ಇಂದು ವಿಚಾರಣೆ ನಡೆಸಿತು.
ಈ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ವಿಶೇಷ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್, ಪ್ರಕರಣ ಸಂಬಂಧ ಈಗಾಗಲೇ ದೋಷಾರೋಪಪಟ್ಟಿ ಸಲ್ಲಿಕೆಯಾಗಿದೆ. ಪೋಕ್ಸೋ ಕಾಯಿದೆಯ ಸೆ. 35ರ ಪ್ರಕಾರ, ಪ್ರಕರಣ ಸಂಬಂಧ ಕಾಗ್ನಿಜೆನ್ಸ್ ಪಡೆದ ಬಳಿಕ ಮೂರು ತಿಂಗಳಲ್ಲಿ ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳಬೇಕು. ವಿಳಂಬವಾದಲ್ಲಿ, ಅದಕ್ಕೆ ಸೂಕ್ತ ಕಾರಣವನ್ನು ವಿಶೇಷ ನ್ಯಾಯಾಲಯ ದಾಖಲಿಸಬೇಕು ಎಂದು ತಿಳಿಸಿದರು. ಆದರೆ, ಕಾಗ್ನಿಜೆನ್ಸ್ ಪಡೆದು ಈಗಾಗಲೇ ಅರು ತಿಂಗಳು ಕಳೆದಿವೆ. ಆದ್ದರಿಂದ ಅರ್ಜಿದಾರ ಆರೋಪಿ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದಕ್ಕೆ ವಿನಾಯಿತಿ ನೀಡಿರುವ ಈ ಹಿಂದಿನ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿದರು.
ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಸಿ.ವಿ ನಾಗೇಶ್, ಅರ್ಜಿಗೆ ಸಂಬಂಧಿಸಿದಂತೆ ತಮ್ಮ ವಾದವನ್ನು ಡಿಎಂಬರ್ ಎರಡರಂದು ಪೂರ್ಣಗೊಳಿಸುವುದಾಗಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿಪಡಿಸಿ ಅಂದೇ ತೀರ್ಮಾನ ತೆಗೆದುಕೊಳ್ಳಲಾಗುವುದಾಗಿ ತಿಳಿಸಿದರು. ಅರ್ಜಿದಾರ ಯಡಿಯೂರಪ್ಪ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ನೀಡಿರುವ ವಿನಾಯಿತಿಯ ಆದೇಶವನ್ನು ನ್ಯಾಯಮೂರ್ತಿಗಳು ವಿಸ್ತರಿಸಿದರು.
ಫೆ. 2, 2024ರಂದು ಬೆಂಗಳೂರಿನ ಸಂಜಯನಗರದ ತಮ್ಮ ನಿವಾಸಕ್ಕೆ ಸಹಾಯ ಕೇಳಿಕೊಂಡು ಬಂದಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪವನ್ನು ಯಡಿಯೂರಪ್ಪ ಅವರು ಎದುರಿಸುತ್ತಿದ್ದಾರೆ. ಬಾಲಕಿಯ ತಾಯಿ ಮಾರ್ಚ್ 14, 2024 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
https://googleads.g.doubleclick.net/pagead/ads?client=ca-pub-8217180321027665&output=html&h=280&adk=48998438&adf=2283158715&w=696&abgtt=9&fwrn=4&fwrnh=100&lmt=1732788955&num_ads=1&rafmt=1&armr=3&sem=mc&pwprc=8813109561&ad_type=text_image&format=696×280&url=https%3A%2F%2Fnaanugauri.com%2Fpocso-case-hearing-of-yediyurappas-petition-postponed%2F&fwr=0&pra=3&rh=174&rw=696&rpe=1&resp_fmts=3&wgl=1&fa=27&uach=WyJXaW5kb3dzIiwiMTAuMC4wIiwieDg2IiwiIiwiMTMxLjAuNjc3OC44NiIsbnVsbCwwLG51bGwsIjY0IixbWyJHb29nbGUgQ2hyb21lIiwiMTMxLjAuNjc3OC44NiJdLFsiQ2hyb21pdW0iLCIxMzEuMC42Nzc4Ljg2Il0sWyJOb3RfQSBCcmFuZCIsIjI0LjAuMC4wIl1dLDBd&dt=1732788955175&bpp=2&bdt=3287&idt=2&shv=r20241120&mjsv=m202411180101&ptt=9&saldr=aa&abxe=1&cookie=ID%3D9352838b8b9dba96%3AT%3D1730096326%3ART%3D1732788954%3AS%3DALNI_MYEE_RyCRwWe3n52nZzY52_o4z1RA&gpic=UID%3D00000f5920242484%3AT%3D1730096326%3ART%3D1732788954%3AS%3DALNI_MYK5AOL3jrdinidiPYIhhASmX7ghg&eo_id_str=ID%3Dc33e6e07b9a22887%3AT%3D1730096326%3ART%3D1732788954%3AS%3DAA-Afja4CFTSGHBEy-BYjL_P0XnM&prev_fmts=696×174%2C324x250%2C0x0%2C300x250%2C324x250%2C696x280&nras=3&correlator=6948674938321&frm=20&pv=1&u_tz=330&u_his=1&u_h=1080&u_w=1920&u_ah=1040&u_aw=1920&u_cd=24&u_sd=1&dmc=8&adx=418&ady=3128&biw=1903&bih=953&scr_x=0&scr_y=1200&eid=31088961%2C95332923%2C31089116%2C31088458%2C95345967%2C95347756&oid=2&pvsid=589917254248727&tmod=851428918&uas=0&nvt=1&fc=384&brdim=0%2C0%2C0%2C0%2C1920%2C0%2C1920%2C1040%2C1920%2C953&vis=1&rsz=%7C%7Cs%7C&abl=NS&fu=128&bc=31&bz=1&td=1&tdf=2&psd=W251bGwsbnVsbCxudWxsLDNd&nt=1&ifi=7&uci=a!7&btvi=2&fsb=1&dtd=55 ತಮ್ಮ ಪುತ್ರಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಯಡಿಯೂರಪ್ಪ ಅವರು ಬಾಲಕಿಯನ್ನು ಪ್ರತ್ಯೇಕ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕಿಯ ತಾಯಿ ಉಸಿರಾಟದ ತೊಂದರೆಯಿಂದ ಮೇ 26, 2024ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.