ಹುಬ್ಬಳ್ಳಿ: ವಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಅವರು ತಮ್ಮ ಕಚೇರಿಯಲ್ಲಿದ್ದ ವಾಲ್ಮಿಕಿ ಮಹರ್ಷಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೊಗಳನ್ನು ತೆಗೆಸಿ ಹಾಕಿರುವ ವಿಡಿಯೋ ಈಗ ವೈರಲ್ ಆಗಿದೆ.
ಪ್ರಲ್ಹಾದ್ ಜೋಶಿ ಅವರು ತಮ್ಮ ಕಚೇರಿಯಿಂದ ಅಂಬೇಡ್ಕರ್ ಮತ್ತು ವಾಲ್ಮಿಕಿ ಫೋಟೊ ತೆಗೆಸಿರುವ ವಿಡಿಯೋವನ್ನು ಕನ್ನಡ ಸುದ್ದಿವಾಹಿನಿ ಟಿವಿ 5 ಪ್ರಸಾರ ಮಾಡಿದೆ.
ಆರ್ ಎಸ್ ಎಸ್ ಮತ್ತು ಬಿಜೆಪಿಯ ಸಂಸ್ಥಾಪಕರ ಫೊಟೋಗಳ ಸಾಲಿನಲ್ಲಿ ಇದ್ದ ಅಂಬೇಡ್ಕರ್ ಮತ್ತು ವಾಲ್ಮೀಕಿ ಅವರ ಫೊಟೋಗಳನ್ನು ಮಾತ್ರ ತೆರವುಗೊಳಿಸುವ ದೃಶ್ಯಗಳು ವಿಡಿಯೋದಲ್ಲಿದೆ.
ಪ್ರಹ್ಲಾದ್ ಜೋಶಿ ಹಿಟ್ಲರ್ ನಂತೆ ವರ್ತಿಸುತ್ತಿದ್ದಾರೆ, ಲಿಂಗಾಯಿತ-ವೀರಶೈವ ಮತ್ತು ಇತರ ಸಮುದಾಯಗಳ ನಾಯಕರನ್ನು ತುಳಿಯುತ್ತಿದ್ದಾರೆ ಎಂದು ಆರೋಪಿಸಿ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭೆ ಕಣಕ್ಕೆ ಇಳಿದಿರುವ ಬೆನ್ನಲ್ಲೇ ಜೋಷಿ ಅಂಬೇಡ್ಕ್ ಮತ್ತು ವಾಲ್ಮೀಕಿ ಭಾವಚಿತ್ರ ತೆರವುಗೊಳಿಸಿ ದೊಡ್ಡ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಘಟನೆ ಕುರಿತಂತೆ ಕಾಂಗ್ರೆಸ್ ಪಕ್ಷ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಬಿಜೆಪಿ & ಆರೆಸ್ಸೆಸ್‌ಗೆ ಅಂಬೇಡ್ಕರ್ ಕಂಡರೆ ಕೋಪ,
ಬಸವಣ್ಣನ ಕಂಡರೆ ದ್ವೇಷ, ವಾಲ್ಮೀಕಿಯನ್ನು ಕಂಡರೆ ಅಸಹನೆ, ಸಂಘಪರಿವಾರದ ಮುದ್ದಿನ ಕೂಸಾದ ಪ್ರಹ್ಲಾದ ಜೋಶಿ ಅವರು ತಮ್ಮೊಳಗಿನ ಲಿಂಗಾಯತ, ದಲಿತ, ಹಿಂದುಳಿದ ವರ್ಗಗಳ ಮೇಲಿನ ದ್ವೇಷವನ್ನು ಮಹನೀಯರ ಫೋಟೋವನ್ನು ಹೊರಹಾಕುವ ಮೂಲಕ ವ್ಯಕ್ತಪಡಿಸಿದ್ದಾರೆ ಎಂದು ಟೀಕಿಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಕಾಂಗ್ರೆಸ್ ಪಕ್ಷ, “ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಅಡಿಯಲ್ಲೇ ಚುನಾವಣೆ ನಿಂತಿದ್ದರೂ, ಅಂಬೇಡ್ಕರ್ ರನ್ನು ಆಚೆ ಎಸೆಯುವ ಸಂಘದ ಮನಸ್ಥಿತಿಯನ್ನು ನಾಡಿನ ಜನತೆ ಸಹಿಸುವುದಿಲ್ಲ. ಬಿಜೆಪಿ ಹಾಗೂ ಜೋಷಿಯ ದುರಹಂಕಾರ ಪರಮಾವಧಿಗೆ ತಲುಪಿದೆ, ಜನತೆ ಬಿಜೆಪಿಯನ್ನು ಹೆಸರಿಲ್ಲದಂತೆ ನಿರ್ನಾಮ ಮಾಡಲಿದ್ದಾರೆ” ಎಂದಿದೆ.