ಬ್ಯಾರಕ್‌ನಲ್ಲಿ ಮೊಬೈಲ್‌ ಪತ್ತೆ: ಪ್ರಜ್ವಲ್‌, ಪ್ರತಾಪ್‌ ರಾಯ್‌ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ಮೊಬೈಲ್ ಫೋನ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ  ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ರಾಯ್ ಅವರನ್ನ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಜೈಲಿನಲ್ಲಿ ಅಕ್ರಮವಾಗಿ ಮೊಬೈಲ್ ಬಳಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಮೊಬೈಲ್ ಹೇಗೆ ಬಂತು.  ಯಾರದ್ದು ಎನ್ನುವುದನ್ನು ಪತ್ತೆ ಮಾಡಲು ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ನೀಡುವಂತೆ ಪೊಲೀಸರು ನ್ಯಾಯಾಲಯದ ಮುಂದೆ ಮನವಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ, ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ರಾಯ್ ಇಬ್ಬರನ್ನೂ ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

 ಆಗಸ್ಟ್ 11ರಂದು ಕೇಂದ್ರ ಸಿಸಿಬಿ ಪೊಲೀಸರು ನಡೆಸಿದ ದಾಳಿಯಲ್ಲಿ ಪ್ರಜ್ವಲ್ ರೇವಣ್ಣ ಅವರಿದ್ದ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿತ್ತು. ಆ ಮೊಬೈಲ್‌ನಲ್ಲಿ ಫೇಸ್‌ಬುಕ್, ವಾಟ್ಸ್‌ಆ್ಯಪ್, ಇನ್‌ಸ್ಟಾಗ್ರಾಮ್, ನೆಟ್‌ಫ್ಲಿಕ್ಸ್ ಮತ್ತಿತರ ಆ್ಯಪ್‌ಗಳು ಪತ್ತೆಯಾಗಿದ್ದವು. ಪ್ರಜ್ವಲ್ ರೇವಣ್ಣ ಅವರು ತಮ್ಮ ಮನೆಯವರು ಹಾಗೂ ವಕೀಲರ ಜೊತೆ ಮಾತನಾಡಲು ಇದನ್ನು ಬಳಸುತ್ತಿದ್ದುದು ಬೆಳಕಿಗೆ ಬಂದಿತ್ತು. ಮೊಬೈಲ್ ಪತ್ತೆಯಾಗಿರುವುದಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ‌ ಎಫ್ಐಆರ್ ದಾಖಲಾಗಿತ್ತು.

ಹೀಗಾಗಿ ತನಿಖೆಯನ್ನು ಮುಂದುವರಿಸಲು ಆರೋಪಿಯಯನ್ನು ವಶಕ್ಕೆ ಪಡೆಯುತ್ತಿರುವುದು ಅತ್ಯಗತ್ಯವಾಗಿರುವ ಹಿನ್ನೆಲೆಯಲ್ಲಿ, ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಬಳಿಕ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

More articles

Latest article

Most read