ಹಾಸನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ಸಾವಿರಾರು ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಸಂತ್ರಸ್ತ ಮಹಿಳೆಯು ತಂದೆ ಮಗ ಇಬ್ಬರ ವಿರುದ್ಧವೂ ದೂರು ನೀಡಿದ್ದರು. ಹೀಗಾಗಿ, ಒಂದೇ ಪ್ರಕರಣದಲ್ಲಿ ರೇವಣ್ಣ ಹಾಗೂ ಪ್ರಜ್ವಲ್ ವಿರುದ್ಧ ಪ್ರತ್ಯೇಕ ಸೆಕ್ಷನ್ ಅಡಿ ಎಫ್‌ಐಆರ್ ದಾಖಲಾಗಿತ್ತು. ಅಂತೆಯೇ ಚಾರ್ಜ್‌ಶೀಟ್‌ನಲ್ಲಿ ಅಗತ್ಯ ದಾಖಲೆಗಳನ್ನು ಎಸ್‌ಐಟಿ ಸಂಗ್ರಹಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿದೆ. ಉಳಿದಂತೆ ಇನ್ನು ಎರಡು ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಬೇಕಿದೆ.