ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದ ಬೆನ್ನಲ್ಲೇ ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈಗ ಇದರ ವಿಚಾರಣೆಯನ್ನು ಸೆ.12ಕ್ಕೆ ಮುಂದೂಡಲಾಗಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪ್ರಕರಣದ ವಿಚಾರಣೆಯನ್ನು ನಡೆಸಿದ್ದು, ಸಂತ್ರಸ್ತೆಯರ ಖಾಸಗಿತನ ಕಾಪಾಡುವ ದೃಷ್ಟಿಯಿಂದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ಗೌಪ್ಯವಾಗಿ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಕಳೆದ ವಿಚಾರಣೆಯಲ್ಲಿ ಕೋರಿತ್ತು. ಇದನ್ನು ಪರಿಶೀಲಿಸುವುದಾಗಿ ನ್ಯಾಯಾಲಯ ಹೇಳಿತ್ತು. ಗೌಪ್ಯ ವಿಚಾರಣೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿಗಳಿಂದ ಆದೇಶ ಪಡೆಯಲಾಗುವುದು ಎಂದು ತಿಳಿಸಿದೆ.
ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ನಮಗೆ ಆರೋಪ ಪಟ್ಟಿ ನೀಡಿಲ್ಲ. ಮೊದಲಿಗೆ ದೂರಿನಲ್ಲಿ ಅತ್ಯಾಚಾರ ಆರೋಪ ಇರಲಿಲ್ಲ. ವಿಚಾರಣಾ ಹಂತದಲ್ಲಿ ಅತ್ಯಾಚಾರ ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ.