ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ವಿಶೇಷ ತನಿಖಾ ತಂಡ ಕಣ್ಣಿಟ್ಟಿದೆ. ಇತ್ತೀಚೆಗೆ ವಿಡಿಯೋ ಬಿಡುಗಡೆ ಮಾಡಿ ತಾವು ಮೇ 31ಕ್ಕೆ ಎಸ್‌ಐಟಿ ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಆದರಂತೆ ಮೇ 30ಕ್ಕೆ ಜರ್ಮನ್ ನ ಮ್ಯೂನಿಕ್ ನಿಂದ ಫ್ಲೈಟ್ ಟಿಕೆಟ್ ಬುಕ್ ಮಾಡಿದ್ದು, ನಾಳೆ ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಗೆ ಪ್ರಜ್ವಲ್ ಬರಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ದೇಶದಿಂದ ನಾಪತ್ತೆಯಾಗಿ ಒಂದು ತಿಂಗಳ ಬಳಿಕ ಹೊಸ ವಿಡಿಯೋ ಮೂಲಕ ಪ್ರತ್ಯಕ್ಷರಾದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್‌ಐಟಿ ಕಾಯುತ್ತಿದೆ. ಪ್ರಜ್ವಲ್ ರೇವಣ್ಣ ಅನಿವಾರ್ಯವಾಗಿ ಬರಲೇ ಬೇಕಿದೆ. ಏನೆಂದರೆ, ಮೇ 31ರಂದು ಪ್ರಜ್ವಲ್ ರೇವಣ್ಣ ಅವರ ಕಳೆದ ಬಾರಿಯ ಸಂಸದ ಸ್ಥಾನ ಅವಲಂಬಿಸಿ ನೀಡಲಾದ ರಾಜತಾಂತ್ರಿಕ ಪಾಸ್‌ಪೋರ್ಟ್‌ನ ಅವಧಿ ಕೊನೆಯಾಗಲಿದೆ. ಹಾಗಾಗಿ ಆ ಪಾಸ್‌ಪೋರ್ಟ್ ಇಟ್ಟುಕೊಂಡು ಅವರು ಓಡಾಡಲು ಸಾಧ್ಯವಿಲ್ಲ. ಹೀಗಾಗಿ ಅವರು ವಾಪಸ್ ಬರಲೇಬೇಕು.
ಲುಫ್ತಾನ್ಸಾ ಏರ್ಲೈನ್ಸ್ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿದ್ದು, ಮೇ 31ರ ಮಧ್ಯರಾತ್ರಿ ಜರ್ಮನಿಯ ಮ್ಯೂನಿಚ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಜೂನ್ 1ಕ್ಕೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.