ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ : ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ

Most read

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್‌ ಪಕ್ಷದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಜಾಮೀನು ಅರ್ಜಿ ವಜಾಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸೋಮವಾರ (ನವೆಂಬರ್‌ 11) ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಕಳೆದ ಅಕ್ಟೋಬರ್‌ 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು (Bail) ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು.

ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು.

More articles

Latest article