ಬೆಂಗಳೂರು: ಹಾಸನ ಕಾಮಕಾಂಡದ ಆರೋಪಿ ಪ್ರಜ್ವಲ್ ರೇವಣ್ಣನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ SIT ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.
ಹಲವಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸುವುದರ ಜೊತೆಗೆ ತನ್ನ ಲೈಂಗಿಕ ದೌರ್ಜನ್ಯವನ್ನು ತಾನೇ ವಿಡಿಯೋ ಮಾಡಿಟ್ಟುಕೊಂಡ ಆರೋಪವನ್ನು ಪ್ರಜ್ವಲ್ ಎದುರಿಸುತ್ತಿದ್ದಾನೆ.
ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಪ್ರಜ್ವಲ್ ನನ್ನು ಇಂದು ನಗರದ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಪ್ರಜ್ವಲ್ ಗೆ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ಜೈಲು ಪಾಲಾಗಿದ್ದಾನೆ.