ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನು ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ಮಹಿಳೆಯೊಬ್ಬರು ಮಹಿಳಾ ಆಯೋಗಕ್ಕೆ ಮೊದಲ ದೂರು ನೀಡಿದ್ದಾರೆ.
ನಿನ್ನೆ ಶನಿವಾರ ಸಂತ್ರಸ್ತೆ ಓರ್ವರು ಪೋನ್ ಕಾಲ್ ಮೂಲಕ ದೂರು ನೀಡಿದ್ದಾರೆ. ಇಂದು ಭಾನುವಾರ ಮಹಿಳಾ ಆಯೋಗಕ್ಕೆ ವಾಟ್ಸಾಪ್ ಮೂಲಕ ದೂರು ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ದೌರ್ಜನ್ಯ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜ್ಯ ಮಹಿಳಾ ಆಯೋಗ ಕೂಡಲೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಪ್ರಕರಣದ ತನಿಖೆಗೆ ನಡೆಸುವಂತೆ ಮನವಿ ಮಾಡಿತ್ತು. ಈ ಪತ್ರದ ಮೇರೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಐಟಿ ತಂಡ ರಚನೆಗೆ ತೀರ್ಮಾನಿಸಿದ್ದು, ಬಿಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತಂಡ ರಚನೆಯಾಗಲಿದೆ. ಅಧಿಕೃತವಾಗಿ ಸಂಜೆ ಆದೇಶ ಹೊರಡಿಸಿಲಿದ್ದು, ನಂತರ ತನಿಖೆ ಚುರುಕುಗೊಳ್ಳಲಿದೆ.
ಬಂಧನದ ಬೀತಿಯಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪರಾರಿಯಾಗಿದ್ದಾರೆ.
ಇನ್ನು ಮತ್ತೊಂದೆಡೆ ಇದೇ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ಗೆ ಸಂಬಂಧಿಸಿದಂತೆ ಜೆಡಿಎಸ್ ಚುನಾವಣಾ ಏಜೆಂಟ್ ಹಾಸನದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.