ಬೆಂಗಳೂರು: ಅತ್ಯಂತ ಮಹತ್ವದ ಬೆಳವಣಿಗೆಯಲ್ಲಿ ಹಾಸನ ಸಂಸದ ಮತ್ತು ಎನ್ ಡಿಎ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಲೈಂಗಿಕ ದೌರ್ಜನ್ಯಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಸಂತ್ರಸ್ಥೆ ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ.
ಅತ್ಯಾಚಾರ, ಲೈಂಗಿಕ ಕಿರುಕುಳದ ಪ್ರಕರಣದಲ್ಲಿ ಸಿಆರ್ ಪಿಸಿ ಸೆಕ್ಷನ್ 164ರ ಅನ್ವಯ ಸಂತ್ರಸ್ಥೆ ನ್ಯಾಯಾಧೀಶರ ಮುಂದೆ ನೀಡುವ ಹೇಳಿಕೆ ಅತ್ಯಂತ ಮುಖ್ಯವಾಗಿದ್ದು, ಇಂದು ಓರ್ವ ಸಂತ್ರಸ್ಥೆ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ.
ಬಿಗಿ ಭದ್ರತೆಯಲ್ಲಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಸಂತ್ರಸ್ಥೆಯನ್ನು ಕರೆತಂದ SIT ಪೊಲೀಸರು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಈ ಸಂದರ್ಭದಲ್ಲಿ ಸಂತ್ರಸ್ಥೆಯ ಹೇಳಿಕೆಗಳನ್ನು ನ್ಯಾಯಾಲಯ ದಾಖಲಿಸಿಕೊಂಡಿತು.
ಈಗಾಗಲೇ ವೈರಲ್ ಆಗಿರುವ ವಿಡಿಯೋದಲ್ಲಿರುವ ಓರ್ವ ಮಹಿಳೆ ಹೇಳಿಕೆ ನೀಡಿದ್ದು, SIT ಪೊಲೀಸರು ಮತ್ತಷ್ಟು ಸಂತ್ರಸ್ಥೆಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.