Saturday, May 18, 2024

ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಭಾರತ ಹಿಂದೂ ರಾಷ್ಟ್ರವಾಗಲಿದೆ: ಮುತಾಲಿಕ್

Most read

2024ರ ಲೋಕಾಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಭಾರತ ಹಿಂದೂ ರಾಷ್ಟ್ರವಾಗಲಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗುರುವಾರ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಆಕ್ಷೇಪ ಎತ್ತುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. “ಭಾರತ ಖಂಡಿತವಾಗಿಯೂ ಹಿಂದೂ ರಾಷ್ಟ್ರವಾಗುತ್ತದೆ. ಯತೀಂದ್ರಗೆ ಸಾಮರ್ಥ್ಯವಿದ್ದರೆ ತಡೆಯಲಿ ಎಂದು ಸವಾಲು ಹಾಕಿದ್ದಾರೆ,

2024ರಲ್ಲಿ ಪ್ರಧಾನಿ ಮೋದಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಆಗ ಭಾರತ ಹಿಂದೂ ರಾಷ್ಟ್ರವಾಗುವುದನ್ನು ಯಾವ ಶಕ್ತಿಯೂ ತಡೆಯುವುದಿಲ್ಲ ಎಂದು ಮುತಾಲಿಕ್ ಹೇಳಿದ್ದಾರೆ.

ಯತೀಂದ್ರ ಅವರಿಗೆ ಹಿಂದುತ್ವದ ಬಗ್ಗೆ ತಿಳಿದಿಲ್ಲ, ಅವರು ತಮ್ಮ ತಂದೆಯ ನೆರಳಿನಲ್ಲಿ ಬೆಳೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮುಸ್ಲಿಮರಾಗಿದ್ದಾರೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಏಕೆಂದರೆ, ಅವರಿಗೆ ಮುಸಲ್ಮಾನರ ಹೊರತಾಗಿ ಬೇರೆ ಯಾವ ಸಮುದಾಯದಲ್ಲೂ ಗೌರವ, ಪ್ರೀತಿ ಇಲ್ಲ. ಅವರು ಭಾರತದಲ್ಲಿರಲು ಅರ್ಹರಲ್ಲ, ಪಾಕಿಸ್ತಾನಕ್ಕೆ ಹೋಗಲಿ, ”ಎಂದು ಹೇಳಿದ್ದಾರೆ.

ವಿಶ್ವದಲ್ಲಿ ಭಾರತ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ.  ಪಾಕಿಸ್ತಾನದಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಮಸೀದಿಗಳ ಮೇಲೆ ಬಾಂಬ್‌ಗಳನ್ನು ಸ್ಫೋಟಿಸಲಾಗುತ್ತದೆ. ಆದರೆ ಇಲ್ಲಿ ಶಾಂತಿಯುತವಾಗಿರುತ್ತದೆ ಎಂದು ಹೇಳಿದ್ದಾರೆ.

More articles

Latest article