Thursday, May 23, 2024

ದಲಿತ ನಾಯಕರ ಘೇರಾವ್ ನಂತರವು ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ!

Most read

ಮೈಸೂರಿನಲ್ಲಿ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ (Prathap Simha) ಅವರಿಗೆ ಕೆಲ ಸ್ಥಳೀಯರು ಹಾಗೂ ದಲಿತ ನಾಯಕರು ಘೇರಾವ್ ಹಾಕಿದ ಬೆನ್ನಲ್ಲೆ ಪ್ರತಾಪ್ ಸಿಂಹ ಮತ್ತೆ ಮಹಿಷ ವಿರುದ್ಧ ಹೇಳಿಕೆ ನೀಡಿದ್ದಾರೆ.

ಹೌದ, ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಅವರು, ನಾನು ಈ ಕ್ಷಣಕ್ಕೂ ಮಹಿಷ ದಸರಾ ವಿರೋಧಿಯಾಗಿದ್ದೇನೆ. ಮಹಿಷಾ ದಸರಾ ವಿರೋದ ಮಾಡಿದ್ದಕ್ಕೆ ಯಾರೋ ನಾಲ್ಕು ಜನ ಕಿಡಿಗೇಡಿಗಳು ಗಲಾಟೆ ಮಾಡಿದರು. ಕಾಂಗ್ರೆಸ್ ನ ಪುಡಾರಿಗಳಿಂದ ಗಲಾಟೆ ನಡೆದಿದೆ. ಮತ್ತೆ ಯಾರೋ ನಾಲ್ಕು ಜನ ಮಹಿಷನ ಭಕ್ತರಿದ್ದಾರೆ. ಚಾಮುಂಡಿ ತಾಯಿಯ ಭಕ್ತರು ಕೋಟ್ಯಾಂತರ ಇದ್ದಾರೆ. ನಾನು ಚಾಮುಂಡಿಯ ಭಕ್ತ‌ನಾಗಿದ್ದೇನೆ ಎಂದು ಹೇಳಿದ್ದಾರೆ.

ಮುಂದುವರೆದು, ನನ್ನನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್ ನವರಿಂದ ಸೋಲಿಸಲು ಸಾಧ್ಯವಿಲ್ಲ. ಈ ಕಾರಣಕ್ಕೆ ಇಂತಹ ಗಲಾಟೆಗಳು ಮುಂದೆನೋ ನಡೆಯುತ್ತದೆ. ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.

More articles

Latest article