ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಅಗತ್ಯವಾಗಿ ಆಗಬೇಕು: ಸಿಎಂ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

ಚಾಮುಂಡಿ ಬೆಟ್ಟದಲ್ಲಿ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಚಾಮುಂಡಿ ಬೆಟ್ಟ ಪ್ರಾಧಿಕಾರ ಅವಶ್ಯಕತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಪರ ಮಾಜಿ ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಬೆಟ್ಟದಲ್ಲಿ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಚಾಮುಂಡಿ ಬೆಟ್ಟ ಪ್ರಾಧಿಕಾರ ಅವಶ್ಯಕತೆ ಇದೆ. ಬೆಟ್ಟಕ್ಕೆ ಪೋಲಿಸ್ ಠಾಣೆ ಹಾಗೂ ಆಸ್ಪತ್ರೆ ಆಗಬೇಕು. ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕೇ ಬೇಕು ಎಂದು ಹೇಳಿದ್ದಾರೆ.

ಮುಂದುವರೆದು, ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ. ಆಸ್ತಿ ಒಡೆದಾಟದ ಬಗ್ಗೆ ಮಾತನಾಡಲ್ಲ ಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.

ಅಮೃತ್ ಯೋಜನೆ ಕುಡಿಯುವ ನೀರು ಚಾಮುಂಡಿ ಬೆಟ್ಟಕ್ಕೆ ತಲುಪದಿರಲು ಕಾರಣ ಯಾರು.? ನಾನು ಹೇಳಿದ್ರೆ ವಿವಾದ ಆಗುತ್ತೆ. ಪೈಪ್‌ ಲೈನ್ ಎಲ್ಲಿ ತಡೆದು ನಿಲ್ಲಿಸಿದ್ದಾರೆ ನೀವೆ ಹೋಗಿ ಹುಡುಕಿ ಎನ್ನುವ ಮೂಲಕ ಪರೋಕ್ಷವಾಗಿ ಹೆಸರು ಹೇಳದೆ ಸಂಸದ ಯದುವೀರ್ ಒಡೆಯರ್ ಅವರಿಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

More articles

Latest article

Most read