ಬಜೆಟ್‌ ತಯಾರಿ; ರೈತ ಸಂಘಟನೆಗಳ ಜತೆ  ಸಿ.ಎಂ.ಸಿದ್ದರಾಮಯ್ಯ ಸಭೆ

Most read

ಬೆಂಗಳೂರು : ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಆರಂಭಿಕ ಭಾಷಣ ಮಾಡಿದ ಅವರು ಈ ರೀತಿ ಹೇಳಿದರು.

ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.  ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಒಕ್ಕೊರಲಿನಿಂದ ಅಭಿನಂದಿಸಿದರು.

More articles

Latest article