ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅತ್ಯಂತ ನಿಖರವಾಗಿ ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶಗಳನ್ನು ಪ್ರಕಟಿಸಿದ್ದ `ಈ ದಿನ’ ಪೋರ್ಟಲ್ ಈ ಬಾರಿಯ ತನ್ನಎರಡನೇ ಮತ್ತು ಅಂತಿಮ ಸಮೀಕ್ಷೆಯನ್ನು ಪ್ರಕಟಿಸಿದ್ದು, ಕಾಂಗ್ರೆಸ್ ಪಕ್ಷ 13ರಿಂದ 18 ಸ್ಥಾನ ಗಳಿಸುವ ಮೂಲಕ ಮೇಲುಗೈ ಸಾಧಿಸುವ ಸಾಧ್ಯತೆಯನ್ನು ಹೇಳಿದೆ.
ಈ ದಿನ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ 13 ರಿಂದ 18 ಸ್ಥಾನ ಗಳಿಸಿದರೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟ 10 ರಿಂದ 13 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆ ಅಂದಾಜಿಸಿದೆ.
ಕಾಂಗ್ರೆಸ್ ಪಕ್ಷ 9 ಸ್ಥಾನಗಳಲ್ಲಿ ಖಚಿತವಾಗಿ ಗೆದ್ದೇ ಗೆಲ್ಲುತ್ತದೆ ಎಂದು ಹೇಳಿರುವ ಸಮೀಕ್ಷೆ, ಬಿಜೆಪಿ ಮೈತ್ರಿಕೂಟ 7 ಸ್ಥಾನಗಳಲ್ಲಿ ಬಿಜೆಪಿಗೆ ಖಚಿತವಾಗಿ ಗೆಲುವು ದಕ್ಕಲಿದೆ. ಇನ್ನುಳಿದ ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿ ಇದೆ ಎಂದು ತಿಳಿಸಿದೆ.
ಸಮೀಕ್ಷೆಗಳ ವಿಷಯದಲ್ಲಿ ಅತ್ಯಂತ ವಿಶ್ವಾಸಾರ್ಹ ಅಂಕಿಅಂಶಗಳನ್ನು ನೀಡುವ ಈ ದಿನ ತನ್ನ ಸಮೀಕ್ಷೆಯಲ್ಲಿ ಇತರೆ ಸಮೀಕ್ಷಾ ಸಂಸ್ಥೆಗಳಿಗೆ ಹೋಲಿಸಿದರೆ ದೊಡ್ಡ ಪ್ರಮಾಣದಲ್ಲಿ ಜನರನ್ನು ಸಂಪರ್ಕಿಸಿ ಅಭಿಪ್ರಾಯ ಪಡೆಯುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ದಿನದ ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ಕಂಡುಬಂದಿತ್ತು. ಇತರ ಸಮೀಕ್ಷೆಗಳೆಲ್ಲವೂ ಕೂಡ ವಿಫಲವಾಗಿದ್ದವು.