ಅವಧಿಗೆ ಮುಂಚೆ ಪುಷ್ಪ-2 ಪ್ರದರ್ಶನ; ಕ್ರಮಕ್ಕೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಅಲ್ಲು ಅರ್ಜುನ್ ನಟಿಸಿರುವ “ಪುಷ್ಪ 2” ತೆಲುಗು ಚಿತ್ರಕ್ಕೆ ಕಂಟಕ ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಚಲನಚಿತ್ರ ಪ್ರದರ್ಶನದ ನಿಯಮಗಳ ಪ್ರಕಾರ ಕರ್ನಾಟಕ ರಾಜ್ಯದ ಚಿತ್ರಮಂದಿರಗಳಲ್ಲಿ ಮುಂಜಾನೆ 6 ಘಂಟೆಯ ಒಳಗೆ ಯಾವುದೇ ಚಿತ್ರಮಂದಿರಗಳಲ್ಲಿ ಚಿತ್ರಗಳನ್ನು ಪ್ರದರ್ಶಿಸುವಂತಿಲ್ಲ ಎಂಬ ರಾಜ್ಯ ಸರ್ಕಾರದ ಆದೇಶವಿದೆ. ಆದರೂ ರಾಜ್ಯದ ಕೆಲವು ಚಿತ್ರಮಂದಿರಗಳಲ್ಲಿ ಅವಧಿಗೂ ಮುನ್ನ ಚಿತ್ರ ಪ್ರದರ್ಶನಗೊಳ್ಳುತ್ತಿರುವುದು ಕಾನೂನು ಬಾಹಿರವಾಗಿರುತ್ತದೆ.

ಸರ್ಕಾರದ ಆದೇಶವನ್ನು ಉಲ್ಲಂಘಿಸುತ್ತಿರುವ ಚಿತ್ರಮಂದಿರಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಾಗೆಯೇ ಚಿತ್ರಮಂದಿರಗಳಲ್ಲಿ ಟಿಕೇಟ್ ದರವು ಮನಸೋ ಇಚ್ಛೆ (ರೂ.500/-, ರೂ.1000/-, ರೂ.1500/-) ನಿಗದಿಪಡಿಸಲಾಗಿದೆ. ಈ ರೀತಿ ಸಾರ್ವಜನಿಕರಿಂದ ಸುಲಿಗೆ ಮಾಡುತ್ತಿರುವ ಚಿತ್ರಮಂದಿರಗಳ ವಿರುದ್ಧ ತಕ್ಷಣ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.
ಮುಂಬರುವ ಪ್ರಾದೇಶಿಕ ಭಾಷೆಯ ಚಿತ್ರಗಳಿಗೆ ಅನುಕೂಲ ಮಾಡಿ, ಕನ್ನಡ ಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದೂ ಮಂಡಳಿ ಅಧ್ಯಕ್ಷ ಉಮೇಶ್ ಬಣಕಾರ್ ಆಗ್ರಹಪಡಿಸಿದ್ದಾರೆ.

More articles

Latest article

Most read