Thursday, December 12, 2024

ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿ ಆತ್ಮಹತ್ಯೆ

Most read

ಮಂಗಳೂರು: ಮಂಗಳೂರಿನ ಲೇಡಿಗೋಷನ್ ಹೆರಿಗೆ ಅಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿಯೊಬ್ಬರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ 28 ವರ್ಷದ ರಂಜಿತಾ ಆಚಾರ್ಯ ಮೃತ ದುರ್ದೈವಿ.

ರಂಜಿತಾ ಅವರಿಗೆ ಅವಧಿ ಪೂರ್ವ ಪ್ರಸವವಾಗಿತ್ತು. ಅಕ್ಟೋಬರ್‌ 30ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಎನ್ ಐಸಿಯುವಿನಲ್ಲಿ ಆರೈಕೆಯಲ್ಲಿದ್ದ ಶಿಶು ನ.3 ರಂದು ಮೃತಪಟ್ಟಿತ್ತು. ರಂಜಿತಾ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್‌ ಚಾರ್ಜ್ ಮಾಡವವರಿದ್ದರು. ಅಷ್ಟರಲ್ಲಿ ಈ ದುರಂತ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಅರ್. ತಿಮ್ಮಯ್ಯ  ತಿಳಿಸಿದ್ದಾರೆ.

ರಂಜಿತಾ ಅವರನ್ನು ಆಸ್ಪತ್ರೆಯಿಂದ ಕರೆದೊಯ್ಯಲು ಅವರ ಕುಟಂಬದ ಸದಸ್ಯರು ಕೂಡ ಲೇಡಿಗೋಷನ್ ಆಸ್ಪತ್ರೆಗೆ ಬಂದಿದ್ದರು. ಆದರೆ ರಂಜಿತಾ ಏಕಾಏಕಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಹಾರಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ  ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ರಂಜಿತಾ ಅವರನ್ನು ಆರಂಭದಲ್ಲಿ ಹೆರಿಗೆಗಾಗಿ ಕಾರ್ಕಳದ ಆಸ್ಪತೆಗೆ ದಾಖಲಿಸಲಾಗಿತ್ತು. ಅವರಿಗೆ ಗಂಭೀರ ಆರೋಗ್ಯ ಸಮಸ್ಯೆ ಇದ್ದುದರಿಂದ ಅ.28ರಂದು ಲೇಡಿಗೋಷನ್‌ ಆಸ್ಪತೆಗೆ ದಾಖಲಿಸಲಾಗಿತ್ತು.

More articles

Latest article