ಅಮಿತ್‌ ಶಾ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ ಮಲ್ಲಿಕಾರ್ಜುನ ಖರ್ಗೆ

Most read

ನವದೆಹಲಿ: ಡಿಸೆಂಬರ್ 17ರಂದು ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ  ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ. ಅಮಿತ್ ಶಾ ಅವರಿಂದ ಸಂವಿಧಾನದ ಶಿಲ್ಪಿ ಬಾಬಾ ಸಾಹೇಬರಿಗೆ  ಅವಮಾನವಾಗಿದೆ ಮತ್ತು ಅವರು ಸದನದ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಖರ್ಗೆ ಟೀಕಿಸಿದ್ದಾರೆ.

ರಾಜ್ಯಸಭೆಯ ಕಾರ್ಯವಿಧಾನ ಮತ್ತು ವ್ಯವಹಾರದ ನಿಯಮಗಳ ನಿಯಮ 188ರ ಅಡಿಯಲ್ಲಿ ಗೃಹ ವ್ಯವಹಾರಗಳ ಸಚಿವರಾದ ಅಮಿತ್ ಶಾ ವಿರುದ್ಧ ನಾನು ಹಕ್ಕು ಚ್ಯುತಿ ನೋಟಿಸ್ ನೀಡುತ್ತಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಡಿಸೆಂಬರ್ 17ರಂದು ಭಾರತದ ಸಂವಿಧಾನದ 75 ವರ್ಷಗಳ ವೈಭವದ ಪ್ರಯಾಣ ಕುರಿತ ಚರ್ಚೆಗೆ ರಾಜ್ಯಸಭೆಯಲ್ಲಿ ನೀಡಿದ ಉತ್ತರದ ವೇಳೆ ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದರು.

ಸದನದ ಸಮ್ಮುಖದಲ್ಲಿ ಯಾವುದೇ ದುರ್ನಡತೆ ಮತ್ತು ಮಾನಹಾನಿಕರ ಹೇಳಿಕೆಗಳನ್ನು ನೀಡುವುದು ಸದನದ ಅವಹೇಳನವಾಗುತ್ತದೆ. ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಬಳಸುವುದು ಡಾ. ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ, ಸದನದಲ್ಲಿ ನೀಡಿದ ಅವರ ಹೇಳಿಕೆಗಳು ಸಂಪೂರ್ಣವಾಗಿ ಅವಹೇಳನಕಾರಿ ಎಂದು ಅವರು ತಮ್ಮ ನೋಟಿಸ್‌ನಲ್ಲಿ ಹೇಳಿದ್ದಾರೆ.

More articles

Latest article