ಅಧಿಕಾರಕ್ಕೆ ಮರಳಿದಲ್ಲಿ ದೇವಾಲಯ, ಗುರುದ್ವಾರದ ಅರ್ಚಕರಿಗೆ ಮಾಸಿಕ ರೂ.18,000: ಎಎಪಿ

ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಮರಳಿ ಬಂದರೆ ದೇವಾಲಯ ಮತ್ತು ಗುರುದ್ವಾರದ ಅರ್ಚಕರಿಗೆ ಮಾಸಿಕ ತಲಾ ರೂ.18,000 ಭತ್ಯೆ ನೀಡುವುದಾಗಿ ಎಎಪಿ ವರಿಷ್ಠ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ‘ಪೂಜಾರಿ– ಗ್ರಂಥಿ ಸಮ್ಮಾನ್ ಯೋಜನೆ’ಯನ್ನು ಪ್ರಕಟಿಸಿದ್ದಾರೆ. 2025ರ ಫೆಬ್ರುವರಿಯಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಅಧಿಕಾರ ಉಳಿಸಿಕೊಳ್ಳಲು ಎಎಪಿ ಹವಣಿಸುತ್ತಿದ್ದರೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಣತೊಟ್ಟಿವೆ. ಈ ನಿಟ್ಟಿನಲ್ಲಿ ಆಮ್‌ ಆದ್ಮಿ ಪಕ್ಷವು ಹಲವು ಯೋಜನೆಗಳನ್ನು ಪ್ರಕಟಿಸುತ್ತಿದೆ.

ಅರ್ಚಕರು ಮತ್ತು ಗ್ರಂಥಿಗಳು ಸಮಾಜದ ಪ್ರಮುಖ ಭಾಗವಾಗಿದ್ದಾರೆ. ಆದರೆ, ಅವರು ನಿರ್ಲಕ್ಷಿಸಲ್ಪಟ್ಟಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ, ನಾವು ಅವರನ್ನು ಬೆಂಬಲಿಸುವ ಯೋಜನೆಯನ್ನು ಪರಿಚಯಿಸುತ್ತಿದ್ದೇವೆ. ಅದರ ಅಡಿಯಲ್ಲಿ ಅವರು ಮಾಸಿಕ 18,000 ರೂ.ಗಳನ್ನು ಪಡೆಯಲಿದ್ದಾರೆ. ಈ ಮಹತ್ವಾಕಾಂಕ್ಷಿ ಯೋಜನೆಗೆ ನಾಳೆಯಿಂದಲೇ ನೋಂದಣಿ  ಪ್ರಾರಂಭವಾಗಲಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಮಂಗಳವಾರ ಖುದ್ದು ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ಮಂದಿರಕ್ಕೆ ಭೇಟಿ ನೀಡಿ ಅಲ್ಲಿನ ಅರ್ಚಕರ ನೋಂದಣಿ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸುವುದಾಗಿ ಅವರು ಹೇಳಿದ್ದಾರೆ. ಮಹಿಳಾ ಸಮ್ಮಾನ್ ಯೋಜನೆಗೆ ಎಎಪಿ ದೆಹಲಿ ಮಹಿಳೆಯರ ವೈಯಕ್ತಿಕ ಮಾಹಿತಿ ಸಂಗ್ರಹಿಸುತ್ತಿದೆ ಎಂಬ ಆರೋಪಗಳ ಬಗ್ಗೆ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಆದೇಶಿಸಿದ ಬೆನ್ನಲ್ಲೇ ಈ ಕೇಜ್ರಿವಾಲ್ ಈ ಘೋಷಣೆ ಮಾಡಿದ್ದಾರೆ.

More articles

Latest article

Most read