ಕಾರಾಗೃಹದಲ್ಲಿ ಆರೋಪಿಗಳಿಗೆ ರಾಜ್ಯಾತಿಥ್ಯ ಅರೋಪ, ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ವಿವಿಧ ಪ್ರಕರಣದಲ್ಲಿ ಬಂಧನಕ್ಕೊಳಗಾದವರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಅರೋಪ ಕೇಳಿಬರುತ್ತಿದ್ದು, ಈ ಕುರಿತು ನಾಳೆಯೊಳಗೆ ಸಮಗ್ರ ವರದಿ ಸಲ್ಲಿಸವಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನ ಕುಮಾರ ಮತ್ತು ಎಸ್.ಪಿ. ಅಡ್ಡೂರು ಶ್ರೀನುವಾಸಲು ಅವರಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಖಡಕ್ ಸೂಚನೆ ನೀಡಿದರು.

ಬುಧವಾರ ಇಲ್ಲಿ ನಡೆದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅರಂಭವಾಗುತ್ತಿದ್ದಂತೆ, ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ರಂಗನಾಥ ಅವರನ್ನು ಜೈಲಿನಲ್ಲಿ ಏನು ನಡಿತಾ ಇದೆ. ಅಕ್ರಮವಾಗಿ ಗುಟಕಾ ಪೂರೈಸಲಾಗುತ್ತಿದೆಯಂತೆ ಎಂದು ಪ್ರಶ್ನಿಸಿದರು. ಇದೆಲ್ಲದಕ್ಕು ಕಡಿವಾಣ ಹಾಕಬೇಕು. ಯಾವುದೇ ಅಕ್ರಮ ಚಟುಚಟಿಕೆ ಜೈಲು ಅಡ್ಡವಾಗಬಾರದು. ಅಲ್ಲಿನ ಸಿ.ಸಿ.ಟಿ.ವಿ. ಫೂಟೇಜ್ ತರಸಿ ಎಂದು ಸೂಚಿಸಿದರು.

More articles

Latest article

Most read