ಕೇರಳದ ಸಾಂಪ್ರದಾಯಿಕ  ಸೀರೆ ತೊಟ್ಟು, ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

Most read

ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲೋಕಸಭೆಯಲ್ಲಿ ಸಂವಿಧಾನದ ಪುಸ್ತಕವನ್ನು ಹಿಡಿದು ಪ್ರಮಾಣ ವಚನ ಸ್ವೀಕರಿಸಿದರು. ಅವರು ಕೇರಳದ ಸಂಪ್ರದಾಯಿಕ ಸೀರೆಯನ್ನು ತೊಟ್ಟಿದ್ದು ಎಲ್ಲರ ಗಮನ ಸೆಳೆಯಿತು ಮತ್ತು ಮೆಚ್ಚುಗೆಗೂ ಪಾತ್ರವಾಯಿತು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಮಾಣ ವಚನ ಬೋಧಿಸಿದರು.

ರಾಜೀವ್‌ ಗಾಂಧಿ ಸೋನಿಯಾ ಗಾಂಧಿ ಅವರ ಪುತ್ರಿಯಾದ ಪ್ರಿಯಂಕಾ ಗಾಂಧಿ ಅವರು ಚೊಚ್ಚಲ ಪ್ರಯತ್ನದಲ್ಲೇ ಯಶಸ್ವಿಯಾಗಿ  ಲೋಕಸಭೆಗೆ ಆಯ್ಕೆಯಾಗಿದ್ದಾರೆ.  ಈ ಸಂದರ್ಭದಲ್ಲಿ ಸೋನಿಯಾ ಗಾಂಧಿ, ಸಹೋದರ ರಾಹುಲ್‌ ಗಾಂಧಿ, ಪತಿ ರಾಬರ್ಟ್‌ ವಾದ್ರಾ ಹಾಗೂ ಇಬ್ಬರು ಪುತ್ರರು ಹಾಜರಿದ್ದರು.  ಸಂಸತ್ತಿನಲ್ಲಿ ಗಾಂಧಿ ಕುಟುಂಬದ ಮೂವರು ಸದಸ್ಯರಿದ್ದಾರೆ. ಲೋಕಸಭೆಯಲ್ಲಿ ರಾಹುಲ್‌ ಮತ್ತು ಪ್ರಿಯಾಂಕಾ ಇದ್ದರೆ ಸೋನಿಯಾ ಗಾಂಧಿ ಅವರು ರಾಜ್ಯಸಭಾ ಸದಸ್ಯರಾಗಿದ್ದಾರೆ.

ಪ್ರಿಯಾಂಕಾ ಅವರ ಪ್ರಮಾಣ ವಚನ ಸ್ವೀಕಾರದ ನಂತರ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರು ಗದ್ದಲ ಆರಂಭಸಿದರು. ಗೌತಮ್‌ ಅದಾನಿ ಲಂಚ ಪ್ರಕರಣ, ಉತ್ತರ ಪ್ರದೇಶದ ಸಂಭಲ್‌ ಹಿಂಸಾಚಾರ  ಮೊದಲಾದ ವಿಷಯಗಳನ್ನು ಪ್ರಸ್ತಾಪಿಸಲು ಅವಕಾಶ ನೀಡುವಂತೆ ಆಗ್ರಹಪಡಿಸಿದರು. ಶಾಂತಿ ಕಾಪಾಡುವಂತೆ ಹಾಗೂ ಕಲಾಪ ಸುಗಮವಾಗಿ ನಡೆಯಲು ಸಹಕಾರ ನೀಡುವಂತೆ ಸ್ಪೀಕರ್ ಅವರು ಮನವಿ ಮಾಡಿಕೊಂಡರೂ ಪ್ರಯೋಜನವಾಗಲಿಲ್ಲ. ಆದ್ದರಿಂದ ಸ್ಪೀಕರ್‌ ಅವರು ಲೋಕಸಭೆಯ ಕಲಾಪವನ್ನು ಮುಂದೂಡಿದರು.

More articles

Latest article