ಪ್ರೀತಮ್ ಗೌಡ ವಿರುದ್ಧ ತನಿಖೆಗೆ ಆದೇಶ: ಐದು ವರ್ಷಗಳಲ್ಲಿ ಹತ್ತು ಪಟ್ಟು ಆಸ್ತಿ ಹೇಗೆ ಬಂತು?

ಹಾಸನ: ಮಾಜಿ ಶಾಸಕ ಪ್ರೀತಮ್ ಗೌಡ ವಿರುದ್ಧ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. 2018 ಮತ್ತು 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸಲ್ಲಿಸಿರುವ ಅಫಿಡವಿಟ್‌ಗಳಲ್ಲಿ ಆಸ್ತಿ ವಿವರಗಳಲ್ಲಿ ವ್ಯತ್ಯಾಸವಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದೆ.

ಪ್ರೀತಮ್ ಗೌಡ ಅವರ ಆಸ್ತಿ ಮೌಲ್ಯ ಸುಮಾರು 10 ಪಟ್ಟು ಹೆಚ್ಚಳವಾಗಿದೆ ಎಂದು ಆರೋಪಿಸಿ ಸಂದೀಪ್ ಪಿ.ಬಿ. ಎಂಬುವವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಗಳ ಕುರಿತು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹಾಸನ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದೆ. ತನಿಖೆ ಪೂರ್ಣಗೊಳಿಸಿ ಅಕ್ಟೋಬರ್ 22ರೊಳಗೆ ವರದಿ ಸಲ್ಲಿಸುವಂತೆ ಹಾಸನ ಲೋಕಾಯುಕ್ತ ಎಸ್‌ಪಿಗೆ ಸೂಚಿಸಲಾಗಿದೆ. ನ್ಯಾ. ಶಿವಪ್ರಕಾಶ್ ಅವರಿದ್ದ ಪೀಠ ಈ ಆದೇಶ ನೀಡಿದೆ.

More articles

Latest article

Most read