ನಿರ್ಮಾಪಕ ಸೌಂದರ್ಯ ಜಗದೀಶ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪ; ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್‌

Most read

ಬೆಂಗಳೂರು:ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ ಆತ್ಮಹತ್ಯೆ ಪ್ರಕರಣದಲ್ಲಿ ಸೌಂದರ್ಯ ಕನ್ ಸ್ಟ್ರಕ್ಷನ್ಸ್‌ ಪಾಲುದಾರರು ಹಾಗೂ ವ್ಯವಸ್ಥಾಪಕರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

ಆದರೂ, 2024ರ ಮೇ 22ರಂದು ಸಲ್ಲಿಸಲಾದ ದೂರಿನ ಆಧಾರದಲ್ಲಿ ಆರೋಪಿಗಳಾದ ವಿ.ಎಸ್. ಸುರೇಶ್, ಎಸ್.ಪಿ. ಹೊಂಬಣ್ಣ ಮತ್ತು ಎಸ್. ಸುಧೀಂದ್ರ ವಿರುದ್ಧ ದಾಖಲಾಗಿರುವ ವಂಚನೆ ಪ್ರಕರಣ ರದ್ದುಗೊಳಿಸುವುದರ ವಿರುದ್ಧ ಮೃತರ ಪತ್ನಿ ಆ‌ರ್. ಶಶಿರೇಖಾ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ ಮತ್ತು ಅಗಸ್ಟೀನ್ ಜಾರ್ಜ್ ಮಸಿಹ್ ಪೀಠ ಅಂಗೀಕರಿಸಿತು. ತನಿಖಾ ಸಂಸ್ಥೆಯು ಪ್ರಕರಣದ ತನಿಖೆ ಮುಂದುವರಿಸಲು ಅಗತ್ಯ ದಾಖಲೆಗಳನ್ನು ಕಲೆ ಹಾಕಿದೆ ಎಂದು ರಾಜ್ಯ ಸರ್ಕಾರದ ವಕೀಲ ಡಿ.ಎಲ್. ಚಿದಾನಂದ ವಾದಿಸಿದರು.

ಮೃತರು ಬರೆದಿರುವ ಪತ್ರದಲ್ಲಿ ಅರ್ಜಿದಾರರು ಎಲ್ಲಿಯೂ ಆತ್ಮಹತ್ಯೆಗೆ ಕುಮ್ಮುಕ್ಕು ನೀಡಿದ್ದಾರೆ ಎಂಬ ಉಲ್ಲೇಖವಿಲ್ಲ ಎಂಬ ಅರ್ಜಿದಾರರ ವಾದ ಮಾನ್ಯ ಮಾಡಿದ್ದ ಹೈಕೋರ್ಟ್ ನ್ಯಾಯಪೀಠ ಪ್ರಕರಣವನ್ನು ರದ್ದುಗೊಳಿಸಿತ್ತು. ಹಾಗೆಯೇ ‘ಈ ಆದೇಶದಲ್ಲಿನ ಅಭಿಪ್ರಾಯಗಳು, ಆರೋಪಿಗಳು ಮತ್ತು ಮೃತರ ನಡುವಿನ ಬೇರೆ ವಿವಾದಗಳಿಗೆ ಅನ್ವಯವಾಗುವುದಿಲ್ಲ’ ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿತ್ತು.
ವಿಚಾರಣೆ ವೇಳೆ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ ಪರ ವಕೀಲರು, ಸೌಂದರ್ಯ ಜಗದೀಶ್ ಬ್ಲಾಕ್‌ ಮೇಲ್‌ಗೆ ಒಳಗಾಗಿರುವ ಸಾಧ್ಯತೆ ಇರುವುದರಿಂದ ಆರೋಪಿಗಳು ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೋರಿದ್ದರು.

More articles

Latest article