ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ: ಸಂಸದ ತೇಜಸ್ವಿ ಸೂರ್ಯ ಪೋಲಿಸ್ ವಶಕ್ಕೆ

ಬೆಂಗಳೂರು: ರಾಜ್ಯದ ಖಜಾನೆ ಖಾಲಿಯಾಗಿದ್ದು, ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರದ ಕುಮ್ಮಕ್ಕಿದೆ ಎಂದು ಆರೋಪಿಸಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆಗೆ ಮುಂದಾದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ನ್ಯಾಷನಲ್ ಕಾಲೇಜು ಮೆಟ್ರೋ ಸ್ಟೇಷನ್ ಬಳಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಅವರನ್ನು ತಡೆದ ಪೊಲೀಸರು ಇಲ್ಲಿ ಪ್ರತಿಭಟನೆ ಮಾಡುವ ಹಾಗಿಲ್ಲ ಎಂದು ಮನವರಿಕೆ ಮಾಡಿದರೂ ಕೇಳದಿದ್ದಾಗ ಪೋಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು.
ಪೊಲೀಸ್ ಅಧಿಕಾರಿಗಳು ಸೂರ್ಯ ಅವರನ್ನು ಪೊಲೀಸ್ ವಾಹನದಲ್ಲಿ ಕೂರಿಸಿ ಠಾಣೆಗೆ ಕರೆದೊಯ್ದರು.

More articles

Latest article

Most read