Thursday, December 12, 2024

545 ಪಿಎಸ್‌ಐ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಸರ್ಕಾರ

Most read

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಪಟ್ಟಿಯನ್ನು ರಾಜ್ಯ ಗೃಹ ಇಲಾಖೆ ಸೋಮವಾರ ಪ್ರಕಟಿಸಿದೆ.

ಈ ಹಿಂದೆ ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆಯಲ್ಲಿ ಆದ ಅಕ್ರಮ ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿತ್ತು. ಇದಾದ ಬಳಿಕ ಹೈಕೋರ್ಟ್‌ ನೀಡಿದ್ದ ಸೂಚನೆಯ ಅನ್ವಯ ರಾಜ್ಯ ಸರ್ಕಾರ ಮರು ಪರೀಕ್ಷೆ ನಡೆಸಿತ್ತು. ಆದರೆ ಫಲಿತಾಂಶ ವಿಳಂಬವಾಗಿತ್ತು. ಇದರಿಂದ ರೊಚ್ಚಿಗೆದ್ದ ಅಭ್ಯರ್ಥಿಗಳು ಭಿಕ್ಷೆ ಬೇಡುವ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದರು. ರಕ್ತದಲ್ಲಿ ಪತ್ರ ಬರೆದು ಫಲಿತಾಂಶ ಪ್ರಕಟಿಸುಂತೆ ಸರ್ಕಾರಕ್ಕೆ ಒತ್ತಾಯಿಸಿದ್ದರು.

ಇದೀಗ ರಾಜ್ಯ ಸರ್ಕಾರ ಅಕ್ಟೊಬರ್ 21ರಂದು ಪಿಎಸ್‌ಐ ನೇರ ನೇಮಕಾತಿಗಳ 01.01.2023ರ ಸುತ್ತೋಲೆಯ ಅನ್ವಯ ಆಯ್ಕೆ ಪಟ್ಟಿ ಪ್ರಕಟಗೊಳಿಸಿದೆ. ಅದರ ಸಂಪೂರ್ಣ ಪಟ್ಟಿ ಕೆಳಕಂಡಂತಿದೆ.

More articles

Latest article