2015-16ನೇ ಸಾಲಿನ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಆರೋಪಿಗಳನ್ನು ಖುಲಾಸೆಗೊಳಿಸಿ ಬೆಂಗಳೂರು ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಪ್ರಕರಣ ಸಿಐಡಿಗೆ ವರ್ಗಾವಣೆಗೊಂಡಿತ್ತು. ಈ ಪ್ರಕರಣವನ್ನು ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಒಟ್ಟು 18 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಆದ್ರೆ, ವಿಚಾರಣಾ ಹಂತದಲ್ಲಿಯೇ ಓರ್ವ ಆರೋಪಿ ಸಾವನ್ನಪ್ಪಿದ್ದ. ಇನ್ನುಳಿದ ಆರೋಪಿಗಳನ್ನು ಇದೀಗ ನ್ಯಾಯಾಲಯದ ಇಂದು(ಏಪ್ರಿಲ್ 25) ಖುಲಾಸೆಗೊಳಿಸಿದೆ.
2016ರಲ್ಲಿ ಪಿಯುಸಿ ರಸಾಯನಶಾಸ್ತ್ರ ಪತ್ರಿಕೆ ಸೋರಿಕೆಯಾಗಿ ವಾಟ್ಸ್ ಆಪ್ಗಳಲ್ಲಿ ಹರಿದಾಡಿತ್ತು. ನಂತರ ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಪ್ರಕರಣ ಸಿಐಡಿಗೆ ವರ್ಗಾವಣೆಗೊಂಡಿತ್ತು. ಈ ಪ್ರಕರಣವನ್ನು ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಒಟ್ಟು 18 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಆದ್ರೆ, ವಿಚಾರಣಾ ಹಂತದಲ್ಲಿಯೇ ಓರ್ವ ಆರೋಪಿ ಸಾವನ್ನಪ್ಪಿದ್ದ. ಇನ್ನುಳಿದ ಆರೋಪಿಗಳನ್ನು ಇದೀಗ ನ್ಯಾಯಾಲಯದ ಇಂದು(ಏಪ್ರಿಲ್ 25) ಖುಲಾಸೆಗೊಳಿಸಿದೆ.