ರಾಜ್ಯಾದ್ಯಂತ ಮಾರ್ಚ್ 3 ರಿಂದ 6ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ (Pulse Polio 2024) ವಂಚಿತವಾಗಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸರಕಾರ ಈಗಾಗಲೇ ಸೂಚನೆಯನ್ನು ನೀಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೊ ಅಭಿಯಾನ ಕಾರ್ಯಕ್ರಮಕ್ಕೆ ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಇಂದು ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಮೂಲಕ ಚಾಲನೆ ನೀಡಿದರು.
ನಗರವಲ್ಲದೇ ಗ್ರಾಮೀಣ ಪ್ರದೇಶಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ವಿತರಣೆಯಾಗಬೇಕೆಂದು ಅಧಿಕಾರಿಗಳು ಶ್ರಮಪಡುತ್ತಿದ್ದಾರೆ.
ಅರೊಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನಿರ್ದೇಶಕರಾದ ಡಾ. ನವೀನ್ ಭಟ್, ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಮದನಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.