ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ನಿನ್ನೆ ಬಂಧನಕ್ಕೊಳಗಾದ ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿರುವಂತೆ ನಾಟಕ ಮಾಡಿದ್ದಾನೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲಾ ನಾರ್ಮಲ್ ಇರುವುದು ತಿಳಿದುಬಂದಿದೆ.
ನಾಯಿ ಮಾಂಸದ ಜೊತೆಗೆ ಕುರಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಅಂಡ್ ಗ್ಯಾಂಗ್ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಪ್ರತಿಭಟಿಸಿದ್ದರು. ಈ ವೇಳೆ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಿ, ಬಳಿಕ ಮಧ್ಯರಾತ್ರಿ 12:00 ಗಂಟೆ ವೇಳೆಗೆ ಅವರನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದರು.
ಬಂಧನವಾಗಿ ವಿಚಾರಣೆ ಸುರುವಾಗುತ್ತಿದ್ದಂತೆ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡಿದ್ದಾನೆ. ಬೆಳಗಿನ ಜಾವ 4:45ರ ವೇಳೆಗೆ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.ವೈದ್ಯರು ಆರೋಗ್ಯ ತಪಾಸಣೆ ವೇಳೆ ಎಲ್ಲಾ ನಾರ್ಮಲ್ ಇರುವುದು ತಿಳಿದುಬಂದಿದೆ. ಊಟ ಮಾಡದ ಕಾರಣ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಯಾಗಿದ್ದಾರೆಂದು ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರ ವಿರುದ್ಧ ಬಿಎನ್‌ಎಸ್ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು. ಬಿಎನ್ ಎಸ್ 131 ಅಪರಾಧವನ್ನ ಕಾಂಪ್ರಮೈಸ್ ಮಾಡಿಕೊಳ್ಳಲು ಯತ್ನಿಸುವುದು, ಬಿಎನ್ ಎಸ್ 351 ಯಾವುದೇ ವ್ಯಕ್ತಿಗೆ ಬೆದರಿಕೆ ಹಾಕುವುದು, ಬಿಎನ್ ಎಸ್ 186 ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಸೇರಿ ಪ್ರಕರಣ ದಾಖಲಿಸಿದ್ದ ಪೊಲೀಸರು.
ಬೆಂಗಳೂರಿನ ಐಶಾರಾಮಿ ಹಾಗೂ ಸಾಮಾನ್ಯ ಹೋಟೆಲ್‌ಗಳಿಗೆ ರಾಜಸ್ಥಾನದಿಂದ ಬರುತ್ತಿದ್ದ ಮಾಂಸ ಸರಬರಾಜಾಗುತ್ತಿತ್ತು.ಇದನ್ನು ಅಬ್ದುಲ್ ರಜಾಕ್ ಎಂಬವವರು ತರಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇಂದು ಅಬ್ದುಲ್ ರಜಾಕ್ ಅವರನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ.