ಚಂಡೀಗಡ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಲು ಅವಕಾಶ ತಿರಸ್ಕರಿಸಿರುವ ಪಂಜಾಬ್ ನ ಬಟಿಂಡಾ ನ್ಯಾಯಾಲಯ ಅ. 27ರಂದು ಖುದ್ದಾಗಿ ಹಾಜರಾಗುವಂತೆ ಬಿಜೆಪಿ ಲೋಕಸಭಾ ಸದಸ್ಯೆ, ನಟಿ ಕಂಗನಾ ರನೌತ್ ಅವರಿಗೆ ಸೂಚಿಸಿದೆ.
ಇದೇ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಲು ಅವಕಾಶ ತಿರಸ್ಕರಿಸಿರುವ ನೀಡುವಂತೆ ಕೋರಿ ಸಲ್ಲಿಸಿದ್ದ ಅವರ ಮನವಿಯನ್ನು ತಿರಸ್ಕರಿಸಿದೆ.
2020-21ರಲ್ಲಿ ಪಂಜಾಬ್ ನ ಶಾಹೀನ್ ಬಾಗ್ ನಲ್ಲಿ ನಡೆದ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 73 ವರ್ಷದ ವೃದ್ಧ ಮಹಿಳೆ ಮಹಿಂದರ್ ಕೌರ್ ಅವರನ್ನು ಗುರಿಯಾಗಿಸಿಕೊಂಡು ಕಂಗನಾ ರನೌತ್ ಟ್ವೀಟ್ ಮೂಲಕ ಟೀಕಿಸಿದ್ದರು. ಅವರ ಹೇಳಿಕೆ ಕುರಿತು ಮಹಿಳೆಯು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆ ನಾನೇ ಎಂದು ಸುಳ್ಳು ಹೇಳಿದ್ದಲ್ಲದೇ, ನನ್ನ ಬಗ್ಗೆ ಮಾನಹಾನಿಕಾರವಾಗಿ ಮಾತನಾಡಿದ್ದಾರೆ ಎಂದು ಕೌರ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಮಧ್ಯೆ ಪ್ರಕರಣವನ್ನು ವಜಾಗೊಳಿಸುವಂತೆ ಕಂಗನಾ ಸಲ್ಲಿಸಿದ್ದ ಅರ್ಜಿಯನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಿರಸ್ಕರಿಸಿತ್ತು. ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ಅವರಿಗೆ ಹಿನ್ನೆಡೆಯಾಗಿತ್ತು.