Friday, December 6, 2024

ಲೋಕ ಚುನಾವಣೆ | ಪಶ್ಚಿಮ ಬಂಗಾಳ ನಂತರ ಪಂಜಾಬ್‌ನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಎಎಪಿ ತೀರ್ಮಾನ : INDIA ಕೂಟಕ್ಕೆ ಹಿನ್ನಡೆ!

Most read

ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷವು ಸಾರ್ವತ್ರಿಕ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಎಲ್ಲಾ 13 ಲೋಕಸಭಾ ಕ್ಷೇತ್ರಗಳಿಂದ ತನ್ನ ಹಿರಿಯ ನಾಯಕರನ್ನು ಕಣಕ್ಕಿಳಿಸಲು ಪಕ್ಷವು ಆಲೋಚಿಸುತ್ತಿದೆ ಎಂದು ಸಿಎಂ ಭಗವಂತ್ ಮಾನ್ ಸುಳಿವು ನೀಡಿದ್ದಾರೆ.

ಪಂಜಾಬ್ ನಲ್ಲಿ ಆಮ್ ಆದ್ಮ ಪಕ್ಷ (ಎಎಪಿ) ಮತ್ತು ಕಾಂಗ್ರೆಸ್ ಪ್ರತ್ಯೇಕವಾಗಿ ಚುನಾವಣೆ ಎದುರಿಸಲಿವೆ. ಇದಕ್ಕಾಗಿ ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜಿವಾಲ್ ಗ್ರೀನ್ ಸಿಗ್ನಲ್‌ ನೀಡಿದ್ದಾರೆ. ಸಂದೀಪ್ ಪಾಠಕ್, ಸಿಎಂ ಭಗವಂತ್ ಮಾನ್ ಸೇರಿದಂತೆ ಹಲವು ಹಿರಿಯ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.

13 ಲೋಕಸಭಾ ಸ್ಥಾನಗಳಿಗೆ 39 ನಾಯಕರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಆದರೆ, ಹಾಲಿ ಸಂಸದ ಸುಶೀಲ್ ರಿಂಕು ಜಲಂಧರ್ ಕ್ಷೇತ್ರದಿಂದ ಅಭ್ಯರ್ಥಿಯಾದರೆ. ಸಿಎಂ ಭಗವಂತ್ ಮಾನ್ ಈಗಾಗಲೇ ಪ್ರತ್ಯೇಕ ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ. ಈ ವಿಷಯವನ್ನು ನೀವು INDIA ಮೈತ್ರಿಕೂಡದ ಸಭೆಯಲ್ಲಿ ಪ್ರಸ್ತಾಪಿಸುತ್ತೇವೆ ಎಂದು ಹೇಳಿದೆ.

ಅಭ್ಯರ್ಥಿಯನ್ನು ಘೋಷಿಸುವ ಮೊದಲು ಸಮೀಕ್ಷೆ

ಮೂಲಗಳ ಪ್ರಕಾರ, ಆಮ್ ಆದ್ಮ ಪಕ್ಷವು ಪ್ರತಿ ಕ್ಷೇತ್ರದಿಂದ 3 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಈಗ ಈ ಅಭ್ಯರ್ಥಿಗಳ ಬಗ್ಗೆ ಪಕ್ಷ ತನ್ನ ಸಮೀಕ್ಷೆ ನಡೆಸಲಿದೆ. ಅಲ್ಲದೇ ಜನ ಮೆಚ್ಚಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ನಿರ್ಧಸಲಾಗಿದೆ ಎಂದು ಹೇಳಲಾಗುತ್ತಿದೆ.

ರಾಜ್ಯ ಸರ್ಕಾರ ಕೆಲವು ಸಚಿವರು ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕೇಳಬಹುದು ಎಂದು ಮೂಲಗಳು ಬಹಿರಂಗಪಡಿಸಿವೆ. ಅಲ್ಲದೆ, ಚುನಾವಣೆಯಲ್ಲಿ ಯುವಕರು ಮತ್ತು ಮಹಿಳೆಯರಿಗೆ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ವರದಿಯಾಗಿದೆ.

More articles

Latest article