ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’: 29 ದಿನಗಳ ಬಳಿಕ SC/ST ಕಾಯ್ದೆಯಡಿ ಪ್ರಕರಣ

ಹಲ್ದ್ವಾನಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಸಭೆ ನಡೆಸಿದ್ದ ವೇದಿಕೆಯನ್ನು ‘ಶುದ್ಧೀಕರಣ’ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಪೊಲೀಸರು 29 ದಿನಗಳ ಬಳಿಕ SC/ST ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಆಗಸ್ಟ್ 8ರಂದು ಉತ್ತರಾಖಂಡದ ಹಲ್ದ್ವಾನಿಯಲ್ಲಿ ಖರ್ಗೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು. ಇದಾದ ಎರಡು ದಿನಗಳ ಬಳಿಕ, ಆಗಸ್ಟ್ 10ರಂದು ಕೆಲವು ಮಂದಿ ವೇದಿಕೆಯಲ್ಲಿ ‘ಶುದ್ಧೀಕರಣ’ ವಿಧಿವಿಧಾನ ನಡೆಸಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಸಂಸದರು ಹಾಗೂ ಮುಖಂಡರು ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮೂರು ಗಂಟೆಗೂ ಹೆಚ್ಚು ಕಾಲ ಕುಳಿತು ಪ್ರತಿಭಟನೆ ನಡೆಸಿದ ಬಳಿಕ ಮಂಗಳವಾರ (ಸೆಪ್ಟೆಂಬರ್ 8) ಎಫ್‌ಐಆರ್ ದಾಖಲಿಸಲಾಗಿದೆ.

ಈ ನಡುವೆ, ಇದೇ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕಳೆದ ತಿಂಗಳೇ ಹಲ್ದ್ವಾನಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ವೇದಿಕೆ ‘ಶುದ್ಧೀಕರಣ’ ಮಾಡಿರುವುದು ಅಪರಾಧ ಎಂದು ರಾಹುಲ್ ಗಾಂಧಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ಘಟನೆ ಕುರಿತು ಖರ್ಗೆ ಅವರು ಆಗಸ್ಟ್ 13ರಂದು ರಾಜ್ಯಸಭೆಯಲ್ಲೂ ಪ್ರಸ್ತಾಪಿಸಿದ್ದರು. ‘ಅಸ್ಪೃಶ್ಯತೆಯ ನೋವನ್ನು ಅನುಭವಿಸುವಂತೆ ಮಾಡಲಾಗಿದೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸಚಿವ ಹಾಗೂ ಸದನದ ನಾಯಕ ಜೆ.ಪಿ. ನಡ್ಡಾ, ಈ ಕುರಿತು ಕ್ರಮ ಕೈಗೊಳ್ಳುವುದಾಗಿ ಸದನದಲ್ಲಿ ಭರವಸೆ ನೀಡಿದ್ದರು.

ಆದರೆ, ವೇದಿಕೆಯಲ್ಲಿ ‘ಶುದ್ಧೀಕರಣ’ ವಿಧಿವಿಧಾನ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು 29 ದಿನ ತೆಗೆದುಕೊಂಡಿರುವುದು ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ (SC/ST Act) ಸಂಬಂಧಿತ ಸೆಕ್ಷನ್ ಗಳನ್ನು ಅನ್ವಯಿಸಲಾಗಿದೆ.

More articles

Latest article

Most read