ಪುಷ್ಪ-2 ಕಾಲ್ತುಳಿತ ದುರಂತ; ನಟ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು

ಹೈದರಾಬಾದ್: ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಇಂದು ಬೆಳಗ್ಗೆ ಅವರನ್ನು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ನಾಂಪಲ್ಲಿ ಕೋರ್ಟ್ ಆದೇಶ ನೀಡಿತ್ತು. ಅವರು ಈಗಾಗಲೇ ತಮ್ಮ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈದರಾಬಾದ್ ನಲ್ಲಿ ಡಿಸೆಂಬರ್ 4ರಂದು ಪುಷ್ಪ-2 ಚಿತ್ರದ ಪ್ರೀಮಿಯರ್ ಪ್ರದರ್ಶನವನ್ನು ಹಮಮಿಕೊಳ್ಳಲಾಗಿತ್ತು. ಈ ಚಿತ್ರವನ್ನು ವೀಕ್ಷಿಸಲು ನಾಯಕ ನಟ ಅಲ್ಲು ಅರ್ಜುನ್, ನಟಿ ರಶ್ಮಿಕಾ ಮಂದಣ್ಣ ಅವರೂ ಆಗಮಿಸಿದ್ದರು. ಈ ಸಂದರ್ಭದಲ್ಲಿ ಚಿತ್ರ ಮತ್ತು ನೆಚ್ಚನ ನಟರನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು. ಇದರಿಂದ ಕಾಲ್ತುಳಿತ ಉಂಟಾಗಿ 35 ವರ್ಷದ ಓರ್ವ ಮಹಿಳೆ ಮೃತಪಟ್ಟು ಆಕೆಯ ಪುತ್ರ ತೀವ್ರವಾಗಿ ಗಾಯಗೊಂಡಿದ್ದ.

ಗಲಾಟೆ ನಡೆಯುವ ಸಾಧ್ಯತೆಗಳಿರುವುದರಿಂದ ಚಿತ್ರಮಂದಿರಕ್ಕೆ ಬರಬಾರದು ಎಂದು ಪೊಲೀಸರು ಸೂಚನೆ ನೀಡಿದ್ದರೂ ಅಲ್ಲು ಅರ್ಜನ್ ಚಿತ್ರಮಂದಿರಕ್ಕೆ ಆಗಮಿಸಿದ್ದರು. ಘಟನೆ ಸಂಬಂಧ ಮೃತ ಮಹಿಳೆಯ ಕುಟುಂಬದ ಸದಸ್ಯರು ಡಿ.5ರಂದು ಚಿತ್ರಮಂದಿರದ ಮಾಲೀಕರು, ನಟ ಅಲ್ಲು ಅರ್ಜುನ್ ಮತ್ತಿತರರ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಲ್ಲು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

More articles

Latest article

Most read