ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ಆ ಯುವತಿ ಮಗುವಿಗೆ ಜನ್ಮ ನೀಡಿದ ನಂತರ ಮದುವೆಯಾಗಲು ಆ ಯುವಕ ನಿರಾಕರಿಸಿದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಈ ಯುವಕನನ್ನು ಕೃಷ್ಣ ರಾವ್ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ ಬಿಜೆಪಿ ಮುಖಂಡ, ನಗರಸಭಾ ಸದಸ್ಯ ಜಗನ್ನಿವಾಸ ರಾವ್ ಅವರ ಪುತ್ರ ಎಂದು ತಿಳಿದು ಬಂದಿದೆ. ಈ ಯುವಕನನ್ನು ರಕ್ಷಿಸಲು ಬಿಜೆಪಿಯ ಮುಖಂಡರು ಸರ್ವ ಪ್ರಯತ್ನ ನಡೆಸುತ್ತಿದ್ದಾರೆ.
ಆ ಯುವತಿ ಜೂನ್ 27ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಪ್ರೌಢಶಾಲೆಯಲ್ಲಿದ್ದಾಗ ಸಹಪಾಠಿಯಾಗಿದ್ದ ನಾನು ಮತ್ತು ಕೃಷ್ಣ ರಾವ್ ಪರಸ್ಪರ ಪ್ರೀತಿಸುತ್ತಿದ್ದೆವು. ಆತ ವಿವಾಹವಾಗುವುದಾಗಿ ನಂಬಿಸಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ. ನಾನು ಈಗ ಗರ್ಭಿಣಿಯಾಗಿದ್ದು, ಆರೋಪಿ ವಿವಾಹವಾಗಲು ನಿರಾಕರಿಸಿದ್ದಾನೆ ಎಂದು ಸಂತ್ರಸ್ತ ಯುವತಿ ಜೂನ್ 24ರಂದು ಪೊಲೀಸ್
ಜೂನ್ 30ರಂದು ಸಂತ್ರಸ್ತ ಯುವತಿಯ ತಾಯಿ ಸುದ್ದಿಗೋಷ್ಠಿ ನಡೆಸಿ, ಮಗಳು ಗರ್ಭಿಣಿಯಾಗಿರುವ ಸಂಗತಿಯನ್ನು ಯುವಕನೇ ನನಗೆ ತಿಳಿಸಿ, ತಮ್ಮಿಂದ ತಪ್ಪಾಗಿದೆ ಎಂದು ಕೇಳಿಕೊಂಡಿದ್ದ. ಈ ವಿಚಾರವನ್ನು ಆತನ ತಂದೆಯ ಗಮನಕ್ಕೆ ತಂದಾಗ ಮದುವೆ ಮಾಡಿಸುವುದಾಗಿ ಅವರು ಭರವಸೆ ನೀಡಿದ್ದರು. ಕೃಷ್ಣರಾವ್ ಪೋಷಕರೊಂದಿಗೆ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿದಾಗ ಮಗಳು 7 ತಿಂಗಳ ಗರ್ಭಿಣಿಯಾಗಿದ್ದು, ಈ ಹಂತದಲ್ಲಿ ಗರ್ಭಪಾತ ಮಾಡಿಸಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದ್ದರು. ಆದರೆ ಯುವಕನ ತಾಯಿ, ನನ್ನ ಮಗನೊಂದಿಗೆ ವಿವಾಹ ಮಾಡುವುದು ಸಾಧ್ಯವೇ ಇಲ್ಲ ಎಂದು ಹೇಳಿದ್ದರು ಎಂದು ಸಂತ್ರಸ್ತೆಯ ತಾಯಿ ವಿವರಿಸಿದ್ದರು.
ಈ ಕೃತ್ಯ ಕುರಿತು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ, ಪೊಲೀಸರು ಯುವಕನನ್ನು ಕರೆಸಿದ್ದರು. ಆಗ ಶಾಸಕ ಅಶೋಕ್ ಕುಮಾರ್ ರೈ ಮಧ್ಯೆ ಪ್ರವೇಶಿಸಿ ಎಫ್ ಐ ಆರ್ ಮಾಡುವುದು ಬೇಡ, ಜೂನ್ 23ಕ್ಕೆ ಯುವಕನಿಗೆ 21 ವರ್ಷ ತುಂಬುತ್ತದೆ. ನಂತರ ಮದುವೆ ಮಾಡಿಸುವುದಾಗಿ ಹೇಳಿದ್ದರು. ನಂತರ ಪೊಲೀಸರು ಮುಚ್ಚಳಿಕೆ ಬರೆಸಿಕೊಂಡಿದ್ದರು. ಹುಡುಗನಿಗೆ 21 ವರ್ಷ ತುಂಬಿದ ನಂತರ ಕೃಷ್ಣರಾವ್ ಪೋಷಕರು ಮದುವೆಗೆ ಒಪ್ಪಿಲ್ಲ. ಜತೆಗೆ ಆರೋಪಿ ಕೃಷ್ಣ ರಾವ್ ಕುಟುಂಬದವರು ನಮಗೆ ಬೆದರಿಕೆಯನ್ನೂ ಹಾಕಿದ್ದಾರೆ ಎಂದೂ ಸಂತ್ರಸ್ತೆಯ ತಾಯಿ ತಿಳಿಸಿದ್ದಾರೆ. ನಮಗೆ ನ್ಯಾಯ ಒದಗಿಸುವಂತೆ ಹಿಂದೂ ಸಂಘಟನೆಗಳ ಮುಖಂಡರಿಗೂ ಮನವಿ ಮಾಡಿದ್ದೇವೆ. ಆದರೆ ಅವರು ರೂ.10 ಲಕ್ಷ ತೆಗೆದುಕೊಂಡು ಸುಮ್ಮನಿರುವಂತೆ ಹೇಳುತ್ತಿದ್ದಾರೆ ಎಂದೂ ತಿಳಿಸಿದ್ದರು.
ನಂತರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ವಿಶ್ವಕರ್ಮ ಒಕ್ಕೂಟದವರು, ಯುವತಿಗೆ ನ್ಯಾಯ ಸಿಗದಿದ್ದರೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದರೆ ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿ ನಡೆಸಿ, ಸಂತ್ರಸ್ತ ಯುವತಿಯ ಬೆನ್ನಿಗೆ ನಿಲ್ಲುವುದಾಗಿ ಘೋಷಿಸಿದ್ದರು. ಎಸ್ ಡಿ ಪಿಐ ಗ್ರಾಮೀಣ ಘಟಕದವರು ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿ, ಯುವತಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಮುಖಂಡರ ಮೌನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು
ಈ ಪ್ರಕರಣ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ದ್ವಿಮುಖ ನೀತಿ ಕುರಿತು ಆಕ್ಷೇಪ ವ್ಯಕ್ತವಾಗಿದೆ.