ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯ ಬಿಜೆಪಿಯ ರಾಜ್ಯಾಧ್ಯಕ್ಷ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈಗ ವಿರೋದ ಪಕ್ಷದ ನಾಯಕ ಆಋ ಅಶೋಕ್ ಈ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.
ಈ ಕುರಿತು ಖಾಗಿ ವಾಹಿನಿ ಜೊತೆ ಮಾತನಾಡಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ, ರಾಜ್ಯಾಧ್ಯಕ್ಷರ ಬದಲಾವಣೆ ವಿಷಯದ ಬಗ್ಗೆ ಸಾಕಷ್ಟು ಬಾರಿ ಚರ್ಚೆಯಾಗಿದೆ ಮತ್ತು ಅದು ವರಿಷ್ಠರ ಗಮನಕ್ಕೂ ಬಂದಿದೆ ಎಂದು ಹೇಳಿದರು. ತಾನು ಮುಂದಿನ ಸಲ ದೆಹಲಿಗೆ ಹೋದಾಗ ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ವಿವರಿಸುತ್ತೇನೆ, ಎಲ್ಲ ಬಿಕ್ಕಟ್ಟುಗಳಿಗೆ ಪರಿಹಾರವಂತೂ ಇದ್ದೇ ಇರುತ್ತದೆ, ಅದನ್ನು ವರಿಷ್ಠರೇ ಸೂಚಿಸುತ್ತಾರೆ ಎಂದು ಅಶೋಕ ಹೇಳಿದರು.
ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಶಾಸಕರ ಗುಂಪು ರಾಜ್ಯ ಬಿಜೆಪಿ ನಾಯಕತ್ವಕ್ಕೆ ಸೆಡ್ಡು ಹೊಡೆದಿದೆ ಮತ್ತು ರಾಜ್ಯಾಧಕ್ಷರ ಬದಲಾವಣೆಗೆ ಪಟ್ಟು ಹಿಡಿದಿದೆ.