ಮುಂದಿನ ಲೋಕಸಭಾ ಚುನಾವಣೆ ನಂತರ ರಾಹುಲ್‌ ಗಾಂಧಿ ಪ್ರಧಾನಿಯಾಗಲಿದ್ದಾರೆ: ತೇಜಸ್ವಿ ಯಾದವ್ ಭವಿಷ್ಯ

Most read

ಪಟ್ನಾ: 2029ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಜಯ ಸಾಧಿಸಲಿದ್ದು ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಮಂತ್ರಿಯಾಗಿ ಪ್ರಮಾಣ ವನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖಂಡ ತೇಜಸ್ವಿ ಯಾದವ್ ಭವಿಷ್ಯ ನುಡಿದಿದ್ದಾರೆ.

ರಾಹುಲ್‌ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ‘ಮತದಾರ ಅಧಿಕಾರ ಯಾತ್ರೆ’ಯ ಅಂಗವಾಗಿ ನವಾಡಾದಲ್ಲಿ ಹಮ್ಮಿಕೊಂಡಿದ್ದ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಎನ್‌ ಡಿ ಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ದೇಶದ ಜನತೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ದೇಶದ ಯುವಜನತೆ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಪಣ ತೊಟ್ಟಿದ್ದಾರೆ ಎಂದರು.

ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವನ್ನು ಕೆಳಗಿಸಬೇಕು. ಯುವಕರಿಗೆ ಅವಕಾಶ ಸಿಗಬೇಕು. ಯುವ ಪೀಳಿಗೆಗೆ ರಾಜ್ಯ ನಡೆಸಲು ಅವಕಾಶ ಸಿಗುವ ಸಮಯ ಬಂದಿದ್ದು ಯುವಕರು ನಿತೀಶ್‌ ಕುಮಾರ್‌ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಕರೆ ನೀಡಿದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್‌) ಹೆಸರಿನಲ್ಲಿ ಬಿಹಾರದ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಹವಣಿಸುತ್ತಿವೆ. ಇದು ಬಿಜೆಪಿ ಮತ್ತು ಚುನಾವಣಾ ಆಯೋಗ ನಡಸುತ್ತಿರುವ ಕುತಂತ್ರ ಎಂದು ತೇಜಸ್ವಿ ಯಾದವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಹಾರದ ಸಸಾರಾಮ್​ನಿಂದ ಮತದಾರರ ಅಧಿಕಾರ ಯಾತ್ರೆ’ ಆರಂಭವಾಗಿದ್ದು, ರಾಜ್ಯಾದ್ಯಂತ 16 ದಿನಗಳು ನಡೆಯಲಿದೆ. ರಾಹುಲ್‌ ಗಾಂಧಿ ಮುನ್ನೆಡೆಸುತ್ತಿರುವ ಈ ಯಾತ್ರೆ 1,300 ಕಿ.ಮೀ ಸಾಗಲಿದ್ದು, ಸೆಪ್ಟೆಂಬರ್‌ 1ರಂದು ಪಟ್ನಾದಲ್ಲಿ ಮುಕ್ತಾಯವಾಗಲಿದೆ.

More articles

Latest article