ರಾಹುಲ್ ಗಾಂಧಿಗೆ ಜಾಮೀನು ಮಂಜೂರು: ಪ್ರಾಪರ್ಟಿ ಶ್ಯೂರಿಟಿ ಕೊಟ್ಟ ಡಿಕೆ ಸುರೇಶ್

Most read

ಬಿಜೆಪಿ ವಿರುದ್ಧ 40% ಜಾಹೀರಾತು ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಇಂದು ಶುಕ್ರವಾರ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ.

ಮಾಜಿ ಸಂಸದ ಡಿ.ಕೆ ಸುರೇಶ್‌, ರಾಹುಲ್‌ ಗಾಂಧಿ ಅವರಿಗೆ 50 ಸಾವಿರ ರೂ. ಮೌಲ್ಯದ ಪ್ರಾಪರ್ಟಿ ಶ್ಯೂರಿಟಿ ನೀಡಿದ್ದು, ಜಾಮೀನು ಮಂಜೂರು ಮಾಡಲಾಗಿದೆ.

ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿ ಅವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು. ಇಂದು ಕೋರ್ಟ್‌ಗೆ ಹಾಜರಾದ ಹಿನ್ನೆಲೆ ಜಾಮೀನು ಮಂಜೂರು ಮಾಡಿದೆ.

ಬಿಜೆಪಿಯು ಸಾರ್ವಜನಿಕ ಕಾಮಗಾರಿಗಳ ನಿರ್ವಹಣೆಗಾಗಿ ಗುತ್ತಿಗೆದಾರರು ಮತ್ತು ಇತರರಿಂದ 40% ಕಮಿಷನ್ ಮಾಡುತ್ತಿದೆ ಎಂದು ಜಾಹೀರಾತುಗಳಲ್ಲಿ ಕಾಂಗ್ರೆಸ್ ಪಕ್ಷವು ಆರೋಪಿಸಿತ್ತು. ಇದೊಂದು ಸುಳ್ಳು ಜಾಹಿರಾತು ಎಂದು ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕ ಕೇಶವ ಪ್ರಸಾದ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

More articles

Latest article