ಮಾಜಿ ಸಚಿವೆ ಸ್ಮೃತಿ ಇರಾನಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸದಂತೆ ಹಾಗೂ ಅಸಹ್ಯವಾಗಿ ಕಾಮೆಂಟ್ ಮಾಡದಂತೆ ತಮ್ಮ ಬೆಂಬಲಿಗರು ಮತ್ತು ಇತರರಿಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಮನವಿ ಮಾಡಿದ್ದಾರೆ. X ವೇದಿಕೆಯಲ್ಲಿ ಕಾಂಗ್ರೆಸ್ ನಾಯಕ, ಜನರನ್ನು ಅವಮಾನಿಸುವುದು ದೌರ್ಬಲ್ಯದ ಸಂಕೇತವಾಗಿದೆ ಹೊರತು ಶಕ್ತಿಯಲ್ಲ ಎಂದು ಹೇಳಿದ್ದಾರೆ.
ಈ ಕುರಿತು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಜೀವನದಲ್ಲಿ ಗೆಲುವು ಮತ್ತು ಸೋಲುಗಳು ಇದ್ದೇ ಇರುತ್ತದೆ. ಶ್ರೀಮತಿ ಸ್ಮೃತಿ ಇರಾನಿ ಅಥವಾ ಇತರ ಯಾವುದೇ ನಾಯಕರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸುವುದನ್ನು ಮತ್ತು ಅಸಹ್ಯವಾಗಿ ವರ್ತಿಸದಿರಲು ನಾನು ಪ್ರತಿಯೊಬ್ಬರನ್ನು ಕೋರುತ್ತೇನೆ. ಜನರನ್ನು ಅವಮಾನಿಸುವುದು ದೌರ್ಬಲ್ಯದ ಸಂಕೇತವೇ ಹೊರತು ಶಕ್ತಿಯಲ್ಲ ಎಂದು ಅವರು ಬರೆದಿದ್ದಾರೆ.
ಸಂವಿಧಾನದಲ್ಲಿ ಯಾರಿಗೂ ಯಾರು ಅಪಮಾನ ಮತ್ತು ಮಾನಹಾನಿ ಮಾಡಲು ಅವಕಾಶ ಇರುವುದಿಲ್ಲ. ಈ ಸಿದ್ದಾಂತವನ್ನು ಅಳವಡಿಸಿಕೊಂಡಿರುವ ರಾಹುಲ್ ಗಾಂಧಿ ಯಾರನ್ನು ಯಾರು ಅಪಮಾನ ಮಾಡಬೇಡಿ ಎಂದು ತಮ್ಮ ಅಭಿಮಾನಿಗಳು ಹಾಗೂ ಇತರರಿಗೂ ಮನವಿ ಮಾಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅಮೇಥಿಯಲ್ಲಿ ಸೋತಿದ್ದರು. ಕಾಂಗ್ರೆಸ್ ನಾಯಕ ಕಿಶೋರಿ ಲಾಲ್ ಶರ್ಮಾ ಇರಾನಿ ಅವರನ್ನು 1.5 ಲಕ್ಷ ಮತಗಳ ಅಂತರದಿಂದ ಸೋಲಿಸಿದರು.
ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಅಮೇಥಿಯನ್ನು 2019 ರ ಲೋಕಸಭಾ ಚುನಾವಣೆಯಲ್ಲಿ ಸ್ಮೃತಿ ಇರಾನಿ ಗೆಲ್ಲವ ಮೂಲಕ ಬಿಜೆಪಿ ವಶಪಡಿಸಿಕೊಂಡಿತ್ತು. ಆದರೆ ಈಗ 2024ರಲ್ಲಿ ಮತ್ತೆ ಅಮೇಥಿಯನ್ನು ಕಾಂಗ್ರೆಸ್ ವಶಪಡಿಸಿಕೊಂಡಿದೆ.