55ನೇ ವರ್ಷಕ್ಕೆ ಕಾಲಿಟ್ಟ ರಾಹುಲ್ ಗಾಂಧಿ ಅವರಿಗೆ ಗಣ್ಯರಿಂದ ಶುಭಾಶಯಗಳ ಸುರಿಮಳೆ

Most read

ನವದೆಹಲಿ: 55ನೇ ವರ್ಷಕ್ಕೆ ಕಾಲಿಟ್ಟಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸೇರಿದಂತೆ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯ ದೊರೆಯಲಿ ಎಂದು ಶುಭ ಕೋರಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ಶುಭಾಯಶಗಳನ್ನು ಕೋರುತ್ತಾ  ‘ಭಾರತದ ಭವಿಷ್ಯದ ಬೆಳಕು’ ಎಂದು ಬಣ್ಣಿಸಿದ್ದಾರೆ. ‘ಸೈದ್ದಾಂತಿಕ ಬದ್ಧತೆ, ಜನಪರ ಕಾಳಜಿ, ಸತ್ಯನಿಷ್ಠುರತೆ, ದೇಶದ ಭವಿಷ್ಯದ ಬಗೆಗಿನ ಸ್ಪಷ್ಟ ಮುನ್ನೋಟ, ಅಪಾರ ಧೈರ್ಯ ಮತ್ತು ಪ್ರೀತಿಯನ್ನು ತುಂಬಿಕೊಂಡ ರಾಹುಲ್ ಗಾಂಧಿಯವರನ್ನು ನನ್ನ ನಾಯಕನೆಂದು ಹೇಳಿಕೊಳ್ಳಲು ನಾನು ಹೆಮ್ಮೆ ಪಡುತ್ತೇನೆ. ಭಾರತದ ಭವಿಷ್ಯದ ಬೆಳಕು ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಸಂದೇಶದಲ್ಲಿ, ಸಂವಿಧಾನದ ಮೌಲ್ಯಗಳಿಗೆ ರಾಹುಲ್ ಅವರ ನಿಷ್ಠೆ ಹಾಗೂ ಸಮರ್ಪಣೆಯನ್ನು ಉಲ್ಲೇಖಿಸಿದ್ದಾರೆ. ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ನ್ಯಾಯಕ್ಕಾಗಿ ರಾಹುಲ್ ಅವರ ಹೋರಾಟವು ಬೇರೆಯವರಿಗಿಂತ ಭಿನ್ನವಾಗಿಸುತ್ತದೆ. ನಿಮ್ಮ ಕಾರ್ಯಗಳು ಕಾಂಗ್ರೆಸ್ ಪಕ್ಷದಲ್ಲಿ ವಿವಿಧತೆಯಲ್ಲಿ ಏಕತೆ, ಸಾಮರಸ್ಯ ಹಾಗೂ ಸಹಾನುಭೂತಿಯ ಸಿದ್ಧಾಂತವನ್ನು ಸಾರುತ್ತವೆ. ಸತ್ಯಕ್ಕಾಗಿ ಹೋರಾಡುವ ನಿಮಗೆ ದೀರ್ಘ, ಆರೋಗ್ಯಕರ ಮತ್ತು ಸಂತೋಷದ ಜೀವನವನ್ನು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅವರು ಶುಭಾಯಶಗಳನ್ನು ಕೋರುತ್ತಾ, ‘ನಮ್ಮ ಜನನಾಯಕರಾದ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಕ್ರಿಕೆಟ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ವಿಶೇಷ ಚೇತನ ಕ್ರೀಡಾಪಟುಗಳಿಗೆ ಬ್ಯಾಟರಿ ಚಾಲಿತ ತ್ರಿಚಕ್ರ ವಾಹನ, ಗಾಲಿ ಕುರ್ಚಿ, ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ್ಧೇನೆ ಎಂದು ತಿಳಿಸಿದ್ದಾರೆ.

More articles

Latest article