ಲೋಕಸಭಾ ಚುನಾವಣೆಯಲ್ಲಿ ಜನರ ವಿಶ್ವಾಸ ಗೆದ್ದಿರುವ ಕಾಂಗ್ರೆಸ್ ಪಕ್ಷ ವಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ನಡೆಯುತ್ತಿದೆ. ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ CWC ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.
ಇನ್ನೂ ಸಂಜೆ ಸೆಂಟ್ರಲ್ ಹಾಲ್‌ನಲ್ಲಿ ಸಂಸದೀಯ ಮಂಡಳಿ ಸಭೆಯಲ್ಲಿ ಎಲ್ಲವೂ ನಿರ್ಧಾರವಾಗಲಿದೆ. CWC ಸಭೆಯಲ್ಲಿ ನಾಯಕರೆಲ್ಲರೂ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಲಿ ಎಂಬುದು ಪಕ್ಷದ ಹಿರಿಯರ ಅಭಿಪ್ರಾಯವಾಗಿದೆ.
ಸಭೆಯಲ್ಲಿ ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಬೇಕು ಎಂಬುದು ಯಾಕೆ ಎನ್ನುವುದಾದರೆ, ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಮೂಲಕ ದೇಶದ ಜನರಿಗೆ ನೇರವಾಗಿ ಸಂಪರ್ಕ ಮಾಡಿದ್ದರು.
ಈ ಬಾರಿ ಎರಡು ಕ್ಷೇತ್ರಗಳನ್ನು ಗೆಲ್ಲಲು ಕಾರಣಕರ್ತರಾಗಿದ್ದಾರೆ. ಇನ್ನೂ ರಾಯ್‌ಬರೇಲಿ ಹಾಗೂ ವಯನಾಡ್ ಕ್ಷೇತ್ರದಲ್ಲಿ ಹೆಚ್ಚು ಅಂತರದಿಂದ ಗೆದ್ದಿದ್ದಾರೆ. ಆಡಳಿತ ಪಕ್ಷ ಹಾಗೂ ಮೋದಿಯವರನ್ನು ಎದುರಿಸಲು ರಾಹುಲ್ ಗಾಂಧಿ ಸರಿಯಾದ ವ್ಯಕ್ತಿ ಎಂದು CWC ಸಭೆಯಲ್ಲಿ ಸದಸ್ಯರು ಸೂಚಿಸಿದ್ದಾರೆ.