ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ ಎಂದಿದ್ದ ರಾಹುಲ್ ಗಾಂಧಿ: ಅರ್ಜಿ ವಜಾಗೊಳಿಸಿ ದಂಡ ವಿಧಿಸಿದ ಹೈಕೋರ್ಟ್

Most read

ಹಾಸನದ ವಿಕೃತ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ಕ್ರಮ‌ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಇಂದು ಆದೇಶ ನೀಡಿರುವ ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ, ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ 25 ಸಾವಿರ ರೂ. ದಂಡ ವಿಧಿಸಿದೆ.

ಅತ್ಯಾಚಾರದಂತಹ ವಿಷಯವನ್ನು ನೀವು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಡಿ ತರಬಾರದು‌. ಹಾಗಂತ ನಾವು ರಾಹುಲ್ ಗಾಂಧಿ ಭಾಷಣ ಅರ್ಹತೆ ಬಗ್ಗೆ ಹೇಳುತ್ತಿಲ್ಲ ಎಂದು ಹೇಳಿದೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಹಾಸನದ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್‌ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ದೇಶಾದ್ಯಂತ ಸುದ್ದಿ ಮಾಡಿತ್ತು. ಈ ವೇಳೆ ಭಾಷಣದಲ್ಲಿ ರಾಹುಲ್‌ ಗಾಂಧಿ ಪ್ರಜ್ವಲ್‌ ರೇವಣ್ಣ ಅವರನ್ನು ಮಾಸ್‌ ರೇಪಿಸ್ಟ್‌ ಎಂದು ಕರೆದು 400 ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದರು.

More articles

Latest article