ಜೆನ್‌-ಝೀ ವಿಶ್ವಾಸ ಗಳಿಸಲು ಕಾಂಗ್ರೆಸ್‌ ಮಾಸ್ಟರ್‌ ಪ್ಲಾನ್: 800 ನಗರಗಳಲ್ಲಿ ರಾಹುಲ್‌ ಸಂವಾದ

ನವದೆಹಲಿ: ದೆಹಲಿ ಸೇರಿದಂತೆ ವಿವಿಧೆಡೆ ವಿದ್ಯಾರ್ಥಿಗಳು ಮತ್ತು ಯುವಜನರ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಕಾಂಗ್ರೆಸ್‌ ಯುವ ಮತದಾರರನ್ನು ಸೆಳೆಯಲು ಹೊಸ ತಂತ್ರ ರೂಪಿಸಿದೆ. ಪರೀಕ್ಷಾ ವ್ಯವಸ್ಥೆ ಸುಧಾರಣೆ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್‌, ತನ್ನ ‘ಛಾತ್ರೋಂ ಕಿ ಗೂಂಜ್‌’ ಅಭಿಯಾನವನ್ನು ಮತ್ತಷ್ಟು ವಿಸ್ತರಿಸಲು ನಿರ್ಧರಿಸಿದೆ.

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪರೀಕ್ಷಾ ವ್ಯವಸ್ಥೆ ಸುಧಾರಣೆ ಕುರಿತು ಚರ್ಚೆ ನಡೆದಿದ್ದು, ಕಾಂಗ್ರೆಸ್‌ ಆಡಳಿತದ ರಾಜ್ಯಗಳಲ್ಲಿ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆಗಳ ಕುರಿತು ಸೂತ್ರ ರೂಪಿಸುವಂತೆ ಸೂಚನೆ ನೀಡಲಾಗಿದೆ.

ಈಗಾಗಲೇ ಕಾಂಗ್ರೆಸ್‌ ‘ಛಾತ್ರೋಂ ಕಿ ಗೂಂಜ್‌’ ಹೆಸರಿನಲ್ಲಿ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಿದೆ. ಪೇಪರ್‌ ಲೀಕ್‌, ಪರೀಕ್ಷಾ ಅಕ್ರಮ, ಪರೀಕ್ಷೆ ರದ್ದು, ನೇಮಕಾತಿ ವಿಳಂಬ ಹಾಗೂ ನಿರುದ್ಯೋಗದಂತಹ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಗುತ್ತಿದೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈ ಅಭಿಯಾನದಡಿ ಕೋಟಾ, ಡೆಹ್ರಾಡೂನ್‌ ಹಾಗೂ ಪ್ರಯಾಗ್‌ರಾಜ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ನೇರವಾಗಿ ಆಲಿಸುವ ಮೂಲಕ ಯುವಜನರ ಬೆಂಬಲ ಗಳಿಸುವ ಪ್ರಯತ್ನವನ್ನು ಕಾಂಗ್ರೆಸ್‌ ನಡೆಸುತ್ತಿದೆ.

ಇದೀಗ ಅಭಿಯಾನವನ್ನು ದೇಶದ ಸುಮಾರು 800 ನಗರಗಳಿಗೆ ವಿಸ್ತರಿಸಲು ಕಾಂಗ್ರೆಸ್‌ ಮುಂದಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಜನರೊಂದಿಗೆ ನೇರ ಸಂಪರ್ಕ ಸಾಧಿಸಿ, ಪರೀಕ್ಷಾ ವ್ಯವಸ್ಥೆ ಸುಧಾರಣೆ ಮತ್ತು ಉದ್ಯೋಗದಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶ ಕಾಂಗ್ರೆಸ್‌ನದ್ದಾಗಿದೆ.

ಇತ್ತೀಚಿನ ಯುವಜನರ ಅಸಮಾಧಾನವನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ಈ ತಂತ್ರ ರೂಪಿಸಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಪರೀಕ್ಷಾ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಚುನಾವಣಾ ವಿಚಾರವನ್ನಾಗಿ ಮಾಡುವ ಮೂಲಕ ಜೆನ್‌-ಝೀ ಮತದಾರರ ವಿಶ್ವಾಸ ಗಳಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ.

More articles

Latest article

Most read