ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ

ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

ಪಶ್ಚಿಮ ಬಂಗಾಳಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದ್ದು ಮಾಲ್ದಾ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ರಾಹುಲ್ ಗಾಂಧಿ ಮತ್ತವರ ಬೆಂಗಾವಲು ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಾರಿನ ಗಾಜುಗಳನ್ನು ಒಡೆದಿದ್ದು ರಾಹುಲ್ ಗಾಂಧಿ ತಕ್ಷಣ ಕಾರಿನಿಂದ ಇಳಿದು ಜನರೊಂದಿಗೆ ಸಾಗಿರುವ ಘಟನೆ ನಡೆದಿದೆ.

ಭಾರತ್ ಜೋಡೋ ನ್ಯಾಯ್ ಯಾತ್ರೆ ಪಶ್ಚಿಮ ಬಂಗಾಳದಿಂದ ಬಿಹಾರಕ್ಕೆ ತೆರಳುತ್ತಿದ್ದಾಗ ರಾಹುಲ್ ಗಾಂಧಿ ಅವರ ಕಾರನ್ನು ಮೇಲೆ ದಾಳಿ ಮಾಡಿದ್ದಾರೆ.

ಈ ಘಟನೆಯ ಹಿಂದೆ ಟಿಎಂಸಿ ಕಾರ್ಯಕರ್ತರ ಶಂಕೆ ಇದ್ದು, ಈ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಿತೂರಿ ಎಂದು ಆರೋಪಿಸಿರುವ ಅಧೀರ್ ರಂಜನ್ ಚೌಧರಿ, “ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಾಹನದ ಹಿಂಬದಿಯ ಗಾಜುಗಳನ್ನು ಕಲ್ಲು ತೂರಾಟ ನಡೆಸಿ ಒಡೆದು ಹಾಕಲಾಗಿದೆ. ಇದನ್ನು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

More articles

Latest article

Most read