ರಾಹುಲ್ ಬ್ಯಾಗ್ ಪರಿಶೀಲನೆ; ಕೈ ನಾಯಕರ ಆಕ್ಷೇಪ

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಧಮನ್ಗಾಂವ್ ರೈಲು ನಿಲ್ದಾಣದಲ್ಲಿ ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿಯಿದ್ದ ಬ್ಯಾಗ್ ಅನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಶನಿವಾರ ಪರಿಶೀಲಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಗೆ ನ. 20ರಂದು ನಡೆಯಲಿರುವ ಚುನಾವಣೆಗಾಗಿ ಪ್ರಚಾರ ನಡೆಸಲು ರಾಹುಲ್ ಗಾಂಧಿ ಅವರು ಹೆಲಿಕಾಪ್ಟರ್ ಮೂಲಕ ಧಮನ್ಗಾಂವ್ ರೈಲು ನಿಲ್ದಾಣ ಸಮೀಪವಿರುವ ಹೆಲಿಪ್ಯಾಡ್‌ಗೆ ಬಂದಿಳಿದಿದ್ದರು. ಈ ಸಂದರ್ಭದಲ್ಲಿಅಧಿಕಾರಿಗಳು ಅವರ ಬಳಿ ಇದ್ದ ಬ್ಯಾಗ್ ಅನ್ನು ಪರಿಶೀಲನೆ ನಡೆಸಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಯಶೋಮತಿ ಠಾಕೂರ್, ರಾಜ್ಯಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಬ್ಯಾಗ್‌ಗಳನ್ನು ಅಧಿಕಾರಿಗಳು ಏಕೆ ಪರೀಶೀಲಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

More articles

Latest article

Most read