ರೈಲ್ವೆ ಇಲಾಖೆಯ ಪದೋನ್ನತಿ ಪರೀಕ್ಷೆ ರದ್ದು

ಟಿ.ಎ. ನಾರಾಯಣಗೌಡರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ

ಹುಬ್ಬಳ್ಳಿ :  ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ಹೋರಾಟಕ್ಕೆ ಮಣಿದ ರೈಲ್ವೆ ಅಧಿಕಾರಿಗಳು,  ನೈರುತ್ಯ ರೈಲ್ವೆ ಇಲಾಖೆಯ ಪದೋನ್ನತಿ ಪರೀಕ್ಷೆಯನ್ನು ರದ್ದು ಪಡಿಸಿದೆ. 

ಹುಬ್ಬಳ್ಳಿ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಯ ಕರವೇ ಮುಖಂಡರು ಹುಬ್ಬಳ್ಳಿಯಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಪ್ರತಿಭಟನೆಗೆ ಇಳಿದಿದ್ದ ಕರವೇ ಕಾರ್ಯಕರ್ತರು, ಪರೀಕ್ಷೆ ರದ್ದು ಪಡಿಸುವಂತೆ ಆಗ್ರಹಿಸಿದರು.
ಬಳಿಕ ಹೋರಾಟಗಾರರ ಒತ್ತಡಕ್ಕೆ ಮಣಿದ ಅಧಿಕಾರಿಗಳು ಪರೀಕ್ಷೆ ರದ್ದುಪಡಿಸಿದರು. ಮುಂದಿನ ದಿನಗಳಲ್ಲಿ ಪರೀಕ್ಷಾ ದಿನಾಂಕ ಪ್ರಕಟಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪರೀಕ್ಷೆ ರದ್ದಾದ ನಂತರ ಹೊರಗೆ ಬಂದ ಅಭ್ಯರ್ಥಿಗಳು,  ಕರವೇ ಮುಖಂಡರ ಪರ ಜಯ ಘೋಷ ಕೂಗಿದರು. 

ಕರ್ನಾಟಕ ರಕ್ಷಣಾ ವೇದಿಕೆ ಧಾರವಾಡ ಜಿಲ್ಲೆ ಗದಗ್ ಜಿಲ್ಲೆ ಕೊಪ್ಪಳ ಜಿಲ್ಲೆ ಹಾವೇರಿ ಜಿಲ್ಲೆ ಹಾಗೂ ಬಾಗಲಕೋಟೆಯ ಇಳಕಲ್ ಹಾಗೂ ಹುನಗುಂದ್ ತಾಲೂಕಿನ ಕರವೇ ಮುಖಂಡರುಗಳು ಹಾಗೂ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು

ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಅವರು ನಿನ್ನೆಯಷ್ಟೇ ಪತ್ರಿಕಾಗೋಷ್ಠಿ ನಡೆಸಿ, ಕನ್ನಡವನ್ನು ಕೈಬಿಟ್ಟು ಹಿಂದಿ, ಇಂಗ್ಲಿಷ್‌ ನಲ್ಲಿ ನಡೆಸಲಾಗುತ್ತಿದೆ. ಹಿಂದಿವಾಲಾಗಳಿಗೆ, ಉತ್ತರ ಭಾರತೀಯರಿಗೆ ಅನುಕೂಲ ಮಾಡಿಕೊಡಲು ಯತ್ನಿಸಲಾಗುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ನಡೆಯಬೇಕಿರುವ ಪದೋನ್ನತಿ ಪರೀಕ್ಷೆಗಳನ್ನು ಯಾವುದೇ ಕಾರಣಕ್ಕೂ ನಡೆಯಲು ಬಿಡುವುದಿಲ್ಲ ಎಂದು ನೇರವಾಗಿ ಎಚ್ಚರಿಸಿದರು.

More articles

Latest article

Most read