ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಲ್ಲೆಗಳಲ್ಲಿ ಡಿಸೆಂಬರ್ 15ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯ ಜತೆಗೆ ಚಳಿಯೂ ಹೆಚ್ಚಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಬಂಗಾಳಕೊಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಇನ್ನೂ 3 ದಿನಗಳ ಕಾಲ ರಾಜ್ಯದ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಹಾಗೂ ಮಡಿಕೇರಿಯಲ್ಲಿ ತಾಪಮಾನ ಭಾರಿ ಕುಸಿದಿದೆ.
ಇಂದು ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರಿನಲ್ಲಿ ತಾಪಮಾನ ಕುಸಿದಿದ್ದು, ಚಳಿಯ ವತಾವರಣ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರಾವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ.
ಬೆಂಗಳೂರಿ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ದಿನವಿಡೀ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

 
                                    
